ಕಲಬುರಗಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ ವಿರುದ್ಧ ಸಿ.ಟಿ. ರವಿ ನೀಡಿದ ಹೇಳಿಕೆ ಮನುವಾದಿ ಬಿಜೆಪಿಯ ಸಂಸ್ಕೃತಿಯನ್ನು ತೋರಿಸುತ್ತದೆ. ಬಿಜೆಪಿಯವರಿಗೆ ಮರ್ಯಾದೆ ಇಲ್ಲ. ಮರ್ಯಾದಾ ಪುರುಷೋತ್ತಮ ರಾಮನ ಹೆಸರು ಹೇಳುವ ಯೋಗ್ಯತೆಯೂ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನುವಾದಿಗಳು ಹೆಣ್ಣನ್ನು ಗೌರವಿಸುವುದಿಲ್ಲ ಎನ್ನುವುದಕ್ಕೆ ಇದು ಉತ್ತಮ ಉದಾಹರಣೆ. ಅವರು ಅಶ್ಲೀಲ ಪದ ಬಳಸುವ ಮೂಲಕ ಸ್ತ್ರೀ ಕುಲಕ್ಕೆ ಅಪಮಾನ ಮಾಡಿದ್ದಾರೆ ಎಂದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಕಾಂಗ್ರೆಸ್‌ನವರು ಗೂಂಡಾಗಳಂತೆ ವರ್ತಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ನಿಜವಾದ ಗೂಂಡಾಗಳು ಬಿಜೆಪಿಯವರೇ ಎಂದು ದೂರಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

