ಶಿರಾ: ಬೆಂಗಳೂರು- ಪುಣೆ ದಶಪಥ ರಾಷ್ಟ್ರೀಯ ಹೆದ್ದಾರಿ (ವಿಷನ್-47) ಕಾಮಗಾರಿ ಅತಿ ಶೀಘ್ರ ಪ್ರಾರಂಭವಾಗಲಿದ್ದು ಇದರಿಂದಾಗಿ ತಾಲ್ಲೂಕಿನ ಚಿತ್ರಣವೇ ಬದಲಾಗುವುದು ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ತಾಲ್ಲೂಕಿನ ತೊಗರಗುಂಟೆ ಬಳಿ ₹25 ಕೋಟಿ ವೆಚ್ಚದಲ್ಲಿ ಶಿರಾ- ಅಮರಾಪುರ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ತಾಲ್ಲೂಕಿನಲ್ಲಿ ಈಗಾಗಲೇ ಮೂರು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗುತ್ತಿದ್ದು, ಶೀಘ್ರದಲ್ಲಿ ಬೆಂಗಳೂರು- ಪೂನಾ ಹೆದ್ದಾರಿ ಕಾಮಗಾರಿ ಪ್ರಾರಂಭವಾಗುವುದರಿಂದ ಒಟ್ಟು ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಹಾದು ಹೋಗುವುದರಿಂದ ಮುಂದಿನ ದಿನಗಳಲ್ಲಿ ತಾಲ್ಲೂಕು ಅಭಿವೃದ್ಧಿಯತ್ತ ಸಾಗುವುದು ಎಂದರು.
ಶಿರಾ- ಅಮರಾಪುರ ರಸ್ತೆ ಕಾಮಗಾರಿ ಸುಮಾರು ₹35 ಕೋಟಿ ವೆಚ್ಚದಲ್ಲಿ ನಡೆಯುತ್ತಿದೆ. ರಸ್ತೆ ಗುಣಮಟ್ಟಕ್ಕೆ ಆದ್ಯತೆ ನೀಡಿ ಹಣದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಹೆಚ್ಚು ಹಣ ಬೇಕಾದರೆ ನನಗೆ ಹೇಳಿ ಕೊಡಿಸಲಾಗುವುದು’ ಎಂದು ಭರವಸೆ ನೀಡಿದರು.
ತಾಲ್ಲೂಕಿನಲ್ಲಿ ನಾಲ್ಕು ಹೆದ್ದಾರಿಗಳು ಹಾದು ಹೋಗುತ್ತಿದ್ದು, ಇದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಶಿರಾದಿಂದ ಬೈರೇನಹಳ್ಳಿಯವರೆಗೆ ನಾಲ್ಕು ಪಥದ ರಸ್ತೆ ಕಾಮಗಾರಿ ₹1 ಸಾವಿರ ಕೋಟಿ ಬಿಡುಗಡೆಯಾಗಿದ್ದು ಇದರ ಮೊದಲ ಹಂತವಾಗಿ ₹680 ಕೋಟಿ ವೆಚ್ಚದಲ್ಲಿ ಶಿರಾದಿಂದ ಮಧುಗಿರಿ ತಾಲ್ಲೂಕಿನ ಕೈಮರದವರೆಗೆ ಕಾಮಗಾರಿ ಶೀಘ್ರ ಪ್ರಾರಂಭವಾಗಲಿದೆ ಎಂದರು.
ಮುಖಂಡರಾದ ಪಿ.ಆರ್.ಮಂಜುನಾಥ್, ಎಂ.ಆರ್.ಶಶಿಧರ್ ಗೌಡ, ನಗರಸಭೆ ಅಧ್ಯಕ್ಷ ಜೀಷಾನ್ ಮಹಮೂದ್, ಉಪಾಧ್ಯಕ್ಷ ಲಕ್ಷ್ಮಿಕಾಂತ್, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಶಂಕರ್, ಸದಸ್ಯರಾದ ಅಜೇಯ್ ಕುಮಾರ್, ಕೃಷ್ಣಪ್ಪ, ರಂಗರಾಜು, ಫರ್ಮಾನ್, ನರೇಶ್ ಗೌಡ, ಎಂ.ಸಿ.ರಾಘವೇಂದ್ರ, ಮಹದೇವಮ್ಮ, ಲಕ್ಷ್ಮಿದೇವಮ್ಮ, ಗ್ರಾ.ಪಂ ಅಧ್ಯಕ್ಷ ಲಕ್ಷ್ಮಣ್, ನರಸಿಂಹಮೂರ್ತಿ, ಗುತ್ತಿಗೆದಾರ ನಾರಾಯಣಪ್ಪ ಪಾಲ್ಗೊಂಡಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





