Breaking News

ರಾಜ್ಯ ಸರ್ಕಾರದಿಂದ ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ: ಗೌರವಧನ ಹೆಚ್ಚಿಸಲು ಅಗತ್ಯ ಕ್ರಮ

ಬೆಂಗಳೂರು: ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರಿಗೆ ಗೌರವಧನ ಹೆಚ್ಚಳದ ಕುರಿತು ಸಿಹಿ ಸುದ್ದಿ ‌ನೀಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಈ ವಿಷಯವನ್ನು ಪ್ರಸ್ತಾಪಿಸಿ, ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ಮಾಸಿಕ 12,000 ರೂಪಾಯಿ ಗೌರವಧನವನ್ನು ನಿಗದಿ ಮಾಡಲಾಗಿದೆ, ಅದು ಕನಿಷ್ಠ ವೇತನಕ್ಕಿಂತ ಕಡಿಮೆಯಾಗಿದೆ.
ಇದರಿಂದಾಗಿ, ಅತಿಥಿ ಉಪನ್ಯಾಸಕರು ತಮ್ಮ ಆರ್ಥಿಕ ಸ್ಥಿತಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಈ ಕುರಿತು ಚರ್ಚೆ ನಡೆಸಿ ಗೌರವಧನವನ್ನು ಹೆಚ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ.‌ ಗೌರವಧನ ಹೆಚ್ಚಳದ ನಿರ್ಧಾರವು ಅತಿಥಿ ಉಪನ್ಯಾಸಕರ ಆರ್ಥಿಕ ಸ್ಥಿತಿ ಸುಧಾರಿಸಲು ಸಹಕಾರಿಯಾಗಲಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *