Breaking News

ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾಧ್ಯಕ್ಷ ಸ್ಥಾನ ಲಭಿಸಿದರೆ ಪಕ್ಷ ಬಲಗೊಳಿಸುವಲ್ಲಿ ಪ್ರಾಮಾಣಿಕ ಪ್ರಯತ್ನ: ಫಾರೂಕ್ ಅಬ್ಬೂನವರ..

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡದಲ್ಲಿ ಕೆಪಿಸಿಸಿಯಿಂದ ಮಹಾನಗರ ಜಿಲ್ಲಾಧ್ಯಕ್ಷರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಲು ಸರ್ವೇ ನಡೆಸಲಾಗಿದ್ದು, ನಮ್ಮ ಸ್ಥಳೀಯ ಸಚಿವರು ಹಾಗೂ ಶಾಸಕರೊಂದಿಗೆ ಚರ್ಚಿಸಿ ಒಳ್ಳೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು

ಫಾರೂಕ್ ಅಬ್ಬೂನವರ ತಿಳಿಸಿದ್ದಾರೆ.ನಗರದಲ್ಲಿ ಇಂದು ಮಾತನಾಡಿದ ಅವರು, ನಮ್ಮ ಕಾಂಗ್ರೆಸ್ ಪಕ್ಷ ತತ್ವ ಸಿದ್ಧಾಂತಗಳ ಮೇಲೆ ನಡೆಯುವಂತಹದ್ದಾಗಿದೆ. ಬಹಳ ದಿನಗಳಿಂದ ನಾನು ಮೂಲ ಕಾಂಗ್ರೆಸ್ಸಿಗನಾಗಿ,

ಯೂತ್ ಕಾಂಗ್ರೆಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು ಹಿಂದೆಯೂ ಅಲ್ಪಸಂಖ್ಯಾತ ಜಿಲ್ಲಾಧ್ಯಕ್ಷನಾಗಿ ಒಳ್ಳೆಯ ಕೆಲಸ, ಕಾರ್ಯಗಳನ್ನು ನಿಭಾಯಿಸಿದ್ದೇನೆ. ಹಿಂದೆ ನಡೆದ ಚುನಾವಣೆಯಲ್ಲಿ

ಹುಬ್ಬಳ್ಳಿ ಧಾರವಾಡದಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡಲು ಹೋರಾಟ ನಡೆಸಿದ್ದೇನೆ. ನಾವು ಇಲ್ಲೇ ಹುಟ್ಟಿ ಇಲ್ಲಿಯೇ ಬೆಳೆದವರು, ಒಂದು ವೇಳೆ

ಕೆಪಿಸಿಸಿ ರಾಜ್ಯಾಧ್ಯಕ್ಷರು, ಮುಖ್ಯಮಂತ್ರಿಗಳು ನಮ್ಮನ್ನು ಪರಿಗಣಿಸಿ ನಮ್ಮಂಥವರಿಗೂ ಅವಕಾಶ ನೀಡಿದರೆ ಅವರ ಮಾರ್ಗದರ್ಶನದಲ್ಲಿ ಸಕ್ರೀಯವಾಗಿ ನಮ್ಮ ಪಕ್ಷಕ್ಕಾಗಿ ದುಡಿದು ಇನ್ನಷ್ಟು ಬಲಗೊಳಿಸುವಲ್ಲಿ ನಾನು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ ಎಂದು ಫಾರೂಕ್ ಅಹಮ್ಮದ ಅಬ್ಬೂನವರ ತಿಳಿಸಿದ್ದಾರೆ.

Share News

About Shaikh BigTv

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *