Breaking News

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಹುದ್ದೆ ಭರ್ತಿ ಮಾಡಲು ರಾಜ್ಯ ಸರ್ಕಾರ ಒಪ್ಪಿಗೆ

ಬೆಂಗಳೂರು: ಕರ್ನಾಟಕ ಸರ್ಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಒಪ್ಪಿಗೆ ನೀಡಿದೆ. ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಪತ್ರವನ್ನು ಆಧರಿಸಿ ನೇಮಕಾತಿಗೆ ಒಪ್ಪಿಗೆ ನೀಡಲಾಗಿದೆ.
ಉಳಿಕೆ ಮೂಲ ವೃಂದದಲ್ಲಿ 8994 ಮತ್ತು ಕಲ್ಯಾಣ ಕರ್ನಾಟಕ ವೃಂದದಲ್ಲಿ 877 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಶುಭಂ ಶುಕ್ಲ ಸರ್ಕಾರದ ಅಧೀನ ಕಾರ್ಯದರ್ಶಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ (ಸೇವೆಗಳು) ಆದೇಶವನ್ನು ಹೊರಡಿಸಿದ್ದಾರೆ. ಯಾವ-ಯಾವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ? ಎಂದು ಆದೇಶದಲ್ಲಿ ಮಾಹಿತಿ ನೀಡಿದ್ದಾರೆ.
ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಅವರ ಪ್ರಸ್ತಾವನೆಯಲ್ಲಿ ವಿವಿಧ ವೃಂದಗಳ ಅರೆ ವೈದ್ಯಕೀಯ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆಡಳಿತಾತ್ಮಕ ಅನುಮತಿ ನೀಡುವಂತೆ ಹಾಗೂ ನೇರ ನೇಮಕಾತಿ ಮೂಲಕ ಅನುಮತಿ ನೀಡಿ ಭರ್ತಿ ಮಾಡುವವರೆಗೆ ಅಥವಾ ಒಂದು ವರ್ಷದ ಅವಧಿಗೆ ಸದರಿ ಖಾಲಿ ಹುದ್ದೆಗಳನ್ನು ಗುತ್ತಿಗೆ/ ಹೊರಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಲಾಗಿತ್ತು.
ಉಳಿಕೆ ಮೂಲ ವೃಂದದಲ್ಲಿ ಕ್ಲಿನಿಕಲ್ ಇನ್ಸ್‌ಸ್ಟ್ರಕ್ಟರ್ 1, ಸಹಾಯಕ ಕೀಟಶಾಸ್ತ್ರಜ್ಞರು 7, ಮೈಕ್ರೋಬಯಾಲಜಿಸ್ಟ್‌ 12, ಕ್ಲಿನಿಕಲ್ ಸೈಕಾಲಜಿಸ್ಟ್ 6, ಮನೋ ಸಾಮಾಜಿಕ ತಜ್ಞರು (ಸೈಕಿಯಾಟ್ರಿಕ್ ಸೋಷಿಯಲ್ ವರ್ಕರ್) 7, ಕಿರಿಯ ರಸಾಯನ ಶಾಸ್ತ್ರಜ್ಞರು 15 ಹುದ್ದೆಗಳ ಭರ್ತಿ.
ಗ್ರೂಪ್‌ ‘ಸಿ’ ವೃಂದಲ್ಲಿ ಫಾರ್ಮಸಿ ಅಧಿಕಾರಿ 640, ಶುಶ್ರೂಷಾಧಿಕಾರಿ 1694, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಕಿ.ಆ.ಸ. (ಮ)) 3317, ಆರೋಗ್ಯ ನಿರೀಕ್ಷಣಾಧಿಕಾರಿ (ಕಿ.ಆ.ಸ) 2628, ಕಿರಿಯ ವೈದ್ಯಕೀಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ 356, ಹಿರಿಯ ವೈದ್ಯಕೀಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ 34, ಕಿರಿಯ ವೈದ್ಯಕೀಯ ವಿಕಿರಣ ಶಾಸ್ತ್ರ ಚಿತ್ರಣ ಅಧಿಕಾರಿ 10, ಹಿರಿಯ ವೈದ್ಯಕೀಯ ವಿಕಿರಣ ಶಾಸ್ತ್ರ ಚಿತ್ರಣ ಅಧಿಕಾರಿ 10, ನೇತ್ರಾಧಿಕಾರಿ 125 ಮತ್ತು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು 83 ಹುದ್ದೆಗಳ ಭರ್ತಿ.
ಕಲ್ಯಾಣ ಕರ್ನಾಟಕ ವೃಂದದಲ್ಲಿ ಗ್ರೂಪ್-ಬಿಯಲ್ಲಿ ಸಹಾಯಕ ಕೀಟಶಾಸ್ತ್ರಜ್ಞರು 2, ಕ್ಲಿನಿಕಲ್ ಸೈಕಾಲಜಿಸ್ಟ್ 2, ಕಿರಿಯ ರಸಾಯನ ಶಾಸ್ತ್ರಜ್ಞರು 3 ಹುದ್ದೆಗಳ ಭರ್ತಿ.
ಗ್ರೂಪ್-ಸಿ ವೃಂದದಲ್ಲಿ ಫಾರ್ಮಸಿ ಅಧಿಕಾರಿ 65, ಶುಶ್ರೂಷಾಧಿಕಾರಿ 351, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ (ಕಿ.ಆ.ಸ. (ಮ)) 133, ಆರೋಗ್ಯ ನಿರೀಕ್ಷಣಾಧಿಕಾರಿ (ಕಿ.ಆ.ಸ) 221, ಕಿರಿಯ ವೈದ್ಯಕೀಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ 57, ಹಿರಿಯ ವೈದ್ಯಕೀಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಿ 2, ಕಿರಿಯ ವೈದ್ಯಕೀಯ ವಿಕಿರಣ ಶಾಸ್ತ್ರ ಚಿತ್ರಣ ಅಧಿಕಾರಿ 30, ನೇತ್ರಾಧಿಕಾರಿ 5 ಮತ್ತು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿಗಳು 6 ಹುದ್ದೆಗಳ ಭರ್ತಿಯಾಗಲಿವೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *