Breaking News

ಬಳ್ಳಾರಿ: ಗಣಿಬಾಧಿತ ಪ್ರದೇಶದಲ್ಲಿ ವೃಕ್ಷೋದ್ಯಾನ ನಿರ್ಮಿಸಲು ಅರಣ್ಯ ಸಚಿವರ ಸೂಚನೆ

ಬಳ್ಳಾರಿ: ಬಹಳ ಹಿಂದೆಯೇ ಸುಪ್ರೀಂಕೋರ್ಟ್ ಗಣಿಗಾರಿಕೆ ಪ್ರದೇಶದಲ್ಲಿ ಪುನರ್‌ ವಸತಿ, ಪುನಶ್ಚೇತನ ಕೆಲಸ ಕೈಗೊಳ್ಳಬೇಕು ಎಂದು ಆದೇಶಿಸಿದೆ. ಬಳ್ಳಾರಿ ಜಿಲ್ಲೆಯಲ್ಲಿ ಗಣಿಬಾಧಿತ ಪ್ರದೇಶದಲ್ಲಿ ತಾಲೂಕಿಗೊಂದು ವೃಕ್ಷೋದ್ಯಾನ ನಿರ್ಮಾಣ ಮಾಡಲು ಅರಣ್ಯ ಸಚಿವರು ಸೂಚನೆ ನೀಡಿದ್ದಾರೆ.
ಈ ಕುರಿತು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಬಳ್ಳಾರಿಯ ಅರಣ್ಯ ಇಲಾಖೆ ಕಛೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ, ಕರ್ನಾಟಕ ಗಣಿ ಪರಿಸರ ಪುನರ್ ಸ್ಥಾಪನೆ ನಿಗಮ (ಕೆ.ಎಂ.ಇ.ಆರ್.ಸಿ) ನಿಧಿ ಬಳಸಿಕೊಂಡು ಜೀವಿ ಪರಿಸ್ಥಿತಿಯ ಮೇಲಾಗಿರುವ ಹಾನಿ ತಗ್ಗಿಸಲು ಕ್ರಿಯಾಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಗಣಿಬಾಧಿತ ಪ್ರದೇಶಗಳಲ್ಲಿ ಪರಿಸರದ ಮೇಲಿನ ದುಷ್ಪರಿಣಾಮ ತಗ್ಗಿಸಲು ತಾಲೂಕಿಗೊಂದು ವೃಕ್ಷೋದ್ಯಾನ ನಿರ್ಮಿಸಲು ಕಾರ್ಯ ಯೋಜನೆ ರೂಪಿಸುವಂತೆ” ಸಚಿವರು ಹೇಳಿದರು.
ಗಣಿ ಪ್ರದೇಶದ ಪುನಶ್ಚೇತನ: ಸಚಿವರು ಮಾತನಾಡಿ, “ಗಣಿ ಪ್ರದೇಶಗಳಲ್ಲಿ ವನ್ಯಜೀವಿ ಸಂರಕ್ಷಣೆ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಂತೆ ಹಾಗೂ ವನ್ಯ ಜೀವಿಗಳಿಗೆ ಬೇಸಿಗೆಯಲ್ಲಿ ನೀರಿನ ಕೊರತೆ ಬಾರದಂತೆ ನೀರುಗುಂಡಿಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು” ಎಂದು ತಿಳಿಸಿದರು.
ಬಳ್ಳಾರಿ ವೃತ್ತದಲ್ಲಿ ಎಷ್ಟು ಸಿ ಪ್ರವರ್ಗದ ಗಣಿಗಳಿವೆ, ಗಣಿ ಕಂಪನಿಗಳಿಗೆ ಪರಿಹಾರಾತ್ಮಕ ಅರಣ್ಯ ಬೆಳೆಸಲು ಎಷ್ಟು ಡಿಗ್ರೇಡೆಡ್ ಅರಣ್ಯ ಭೂಮಿ ನೀಡಲಾಗಿದೆ, ಎಷ್ಟು ಭೂಮಿಯಲ್ಲಿ ಪರಿಹಾರಾತ್ಮಕ ಅರಣ್ಯ ಬೆಳೆಸಲಾಗಿದೆ. ಅರಣ್ಯದಂಚಿನಲ್ಲಿ ಶ್ರೀಗಂಧ, ಬೀಟೆ, ತೇಗ ಮೊದಲಾದ ಬೆಲೆಬಾಳುವ ಮರಗಳ ಜಿಯೋ ಟ್ಯಾಗ್ ಮಾಡಲಾಗಿದೆಯೇ ಎಂಬ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದ ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು.
ದಾವಣಗೆರೆ, ಕೊಪ್ಪಳ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ವಿಭಾಗದಲ್ಲಿ ಹೆಚ್ಚಿನ ಸಸಿಗಳನ್ನು ನೆಟ್ಟು ಪೋಷಿಸಲು ಮತ್ತು ರೈತರ ಬೇಡಿಕೆಗೆ ಅನುಗುಣವಾಗಿ ಸಸಿಗಳನ್ನು ವಿತರಿಸಲು ನರ್ಸರಿಗಳಲ್ಲಿ ಸಸಿ ಬೆಳೆಸಲು ಹೆಚ್ಚಿನ ಮುತುವರ್ಜಿ ವಹಿಸುವಂತೆ ಸೂಚಿಸಿದರು.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *