Breaking News

ರಾಜ್ಯದಲ್ಲಿ ಮತ್ತೊಂದು ಐಐಟಿ ಸ್ಥಾಪನೆಗೆ ಕೇಂದ್ರದೊಂದಿಗೆ ಚರ್ಚೆ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಮಂಡ್ಯ : ಜಿಲ್ಲೆಯ ಕೆಆರ್​​​​​​ಎಸ್​​​​​ ಸಮೀಪ ಐಐಟಿ ಸ್ಥಾಪನೆ ಮಾಡುವ ಬಗ್ಗೆ ಶಾಸಕ ದಿನೇಶ್ ಗೂಳಿಗೌಡ ಅವರು ಮನವಿ ಮಾಡಿದ್ದು ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿ ಕೇಂದ್ರದೊಂದಿಗೆ ಚರ್ಚಿಸುವುದಾಗಿ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹಾಗೂ ಮಂಡ್ಯ ಸಂಸದ ಹೆಚ್​.ಡಿ.ಕುಮಾರಸ್ವಾಮಿ ಅವರು ಭರವಸೆ ನೀಡಿದರು.
ಮಂಡ್ಯದಲ್ಲಿ ಸಮಾರೋಪವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗಿಯಾಗಿ ಸಮ್ಮೇಳನದ ಅಧ್ಯಕ್ಷ ಡಾ.ನಾಡೋಜ ಗೊ.ರು.ಚನ್ನಬಸಪ್ಪ ಅವರನ್ನು ಅಭಿನಂದಿಸಿ ಮಾತನಾಡಿದ ಅವರು, ರಾಜ್ಯಕ್ಕೆ ಇನ್ನೊಂದು ಐಐಟಿ ಬಂದರೆ ಖುಷಿಯಾಗಲಿದೆ.. ಬರಲಿ, ಬರಲೇಬೇಕು ಕೂಡ. ಈ ಬಗ್ಗೆ ಎಲ್ಲರೂ ಒಟ್ಟಿಗೆ ಪ್ರಯತ್ನ ಮಾಡೋಣ. ಹೀಗಾಗಿ ಎಲ್ಲರೂ ಸಹಕರಿಸಿ ಎಂದು ಹೆಚ್​​​​​​ಡಿಕೆ ಮನವಿ ಮಾಡಿದರು.
ಇನ್ನು 15,000 ಕೋಟಿ ರೂಪಾಯಿ ವೆಚ್ಚದಲ್ಲಿ ಭದ್ರಾವತಿಯ ಭಾರತ ರತ್ನ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಪುನಚ್ಚೇತನ ಮಾಡಲು ತೀರ್ಮಾನಿಸಲಾಗಿದೆ ಎಂದ ಸಚಿವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ವಿಶ್ವೇಶ್ವರಯ್ಯ ಅವರ ದೂರದೃಷ್ಟಿಯ ಫಲವಾಗಿ ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಸ್ಥಾಪನೆ ಆಗಿತ್ತು ಎಂದು ಶ್ಲಾಘಿಸಿದರು. ಆಗಿನಿಂದ ಕೈಗಾರಿಕಾಭಿವೃದ್ಧಿಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುವ ನಿಟ್ಟಿನಲ್ಲಿ ಹಲವು ಮಹತ್ವದ ಉಪಕ್ರಮಗಳನ್ನು ಕೈಗೊಂಡಿದೆ ಎಂದು ವಿವರಿಸಿದರು.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *