Breaking News

ಬೆಳಗಾವಿ ಚಲೋ ನಡೆಸುವ ಬಗ್ಗೆ ಆಲೋಚನೆ: ಸಿ.ಟಿ.ರವಿ

ಚಿಕ್ಕಮಗಳೂರು: ರಾಜ್ಯ ಸರ್ಕಾರ ಹಮ್ಮುರಾಬಿ ಸಿದ್ಧಾಂತದ ಮೇಲೆ ನಡೆಯುತ್ತಿದೆ. ನನ್ನನ್ನು ಬಂಧಿಸಿ ಇಡೀರಾತ್ರಿ ಸುತ್ತಾಡಿಸಿದ ಕ್ರಮದ ವಿರುದ್ಧ ಹಕ್ಕುಚ್ಯುತಿ ಮಂಡಿಸುತ್ತೇನೆ. ಬೆಳಗಾವಿ ಚಲೊ ನಡೆಸುವ ಬಗ್ಗೆಯೂ ಆಲೋಚನೆ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.
ಮುಖ್ಯಮಂತ್ರಿ ಮತ್ತು ರಾಜ್ಯ ಸರ್ಕಾರಕ್ಕೆ ಸಂವಿಧಾನದ ಮೇಲೆ ನಂಬಿಕೆ ಇದ್ದಂತೆ ಕಾಣಿಸುತ್ತಿಲ್ಲ. ಕಬ್ಬಿನ ಗದ್ದೆ, ಜಲ್ಲಿ ಕ್ರಷರ್ ಬಳಿಗೆ ಪೊಲೀಸರು ಕರೆದೊಯ್ದು ಕೂರಿಸಿದ್ದರು. ಅವರಿಗೆ ಪ್ರತಿ ಅರ್ಧ ಗಂಟೆಗೊಮ್ಮೆ ಬರುತ್ತಿದ್ದ ನಿರ್ದೇಶನದಂತೆ ಅವರು ನಡೆದುಕೊಳ್ಳು‌ತ್ತಿದ್ದರು. ಮಾಧ್ಯಮ ಪ್ರತಿನಿಧಿಗಳು ಬೆನ್ನು ಹತ್ತಿದ್ದರಿಂದ ಜೀವ ಉಳಿದಿದೆ. ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಸುದ್ದಿಗಾರರಿಗೆ ಭಾನುವಾರ ಪ್ರತಿಕ್ರಿಯಿಸಿದರು.
ಸಿ.ಟಿ. ರವಿ ಬದುಕಿ ಬಂದಿದ್ದೆ ಹೆಚ್ಚು ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದಾರೆ. ಯಾರೇನು ಮಾಡುತ್ತಾರೆ ಬನ್ನಿ ಎಂದು ಬೆಳಗಾವಿ ಜನ ಕರೆಯುತ್ತಿದ್ದಾರೆ. ಬೀದಿಯಲ್ಲಿ ರಕ್ಷಣೆ ಸಿಗುತ್ತದೆ ಎಂದು ಸರ್ಕಾರ ಭಾವಿಸಿದ್ದಾದರೂ ಹೇಗೆ? ಇದರ ವಿರುದ್ಧ ಕಾನೂನು ಹೋರಾಟ ನಡೆಸಲಾಗುವುದು. ಜನತಾ ನ್ಯಾಯಾಲಯದ ಮುಂದೆಯೂ ಹೋಗುತ್ತೇವೆ’ ಎಂದರು.
ವಿಧಾನಸೌಧದ ಕಾರಿಡಾರ್‌ನಲ್ಲಿ ನನ್ನ ಮೇಲೆ ದಾಳಿ ನಡೆಸಲು ಬಂದ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ಬೆಳಗಾವಿ ಚಲೊ ನಡೆಸುವ ಬಗ್ಗೆ ಪಕ್ಷ ಆಲೋಚನೆ ನಡೆಸುತ್ತಿದೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ನನ್ನೊಂದಿಗೆ ಮಾತನಾಡಿದ್ದಾರೆ’ ಎಂದು ಹೇಳಿದರು.
ಶನಿವಾರ ಮಧ್ಯರಾತ್ರಿ ಚಿಕ್ಕಮಗಳೂರು ನಗರಕ್ಕೆ ಬಂದ ಸಿ.ಟಿ. ರವಿ ಅವರನ್ನು ಕಾರ್ಯಕರ್ತರು ಭವ್ಯ ಸ್ವಾಗತ ನೀಡಿ ಬರ ಮಾಡಿಕೊಂಡರು.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *