Breaking News

ಶತಮಾನೋತ್ಸವ ನಡೆಸಿ ಕಾಂಗ್ರೆಸ್ ಹಣ ಪೋಲು ಮಾಡುತ್ತಿದೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್ ಸಮಾವೇಶ ನಡೆಸಿ ಹಣ ಪೋಲು ಮಾಡುತ್ತಿದೆ. ಮಹಾತ್ಮ ಗಾಂಧೀಜಿಗೂ ಇಂದಿನ ಕಾಂಗ್ರೆಸ್‌ಗೂ ಏನು ಸಂಬಂಧ? ಈಗಿರುವ ಕಾಂಗ್ರೆಸ್ ನಲ್ಲಿ ಮೂಲಕ ಕಾಂಗ್ರೆಸ್ ಕಾಣುತ್ತಿಲ್ಲ. ಇದು ಇಂದಿರಾ ಗಾಂದಿ ಕಾಂಗ್ರೆಸ್ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಹೇಳಿದ್ದಾರೆ.
ಬೆಳಗಾವಿಯಲ್ಲಿ ಅಧಿವೇಶನದ ಶತಮಾನೋತ್ಸವ ಆಚರಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿರುವ ಕುರಿತು ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಗೂ ಇಂದಿನ ಕಾಂಗ್ರೆಸ್‌ಗೂ ಏನು ಸಂಬಂಧ? ಮಹಾತ್ಮಾ ಗಾಂಧಿ ಕಾಂಗ್ರೆಸ್ ಮತ್ತು ಇಂದಿನ ಕಾಂಗ್ರೆಸ್ ನಡುವೆ ವ್ಯತ್ಯಾಸವಿದೆ. ಈಗಿನ ಕಾಂಗ್ರೆಸ್ ಮೂಲ ಕಾಂಗ್ರೆಸ್ ಅಲ್ಲ. ಈ ಕಾಂಗ್ರೆಸ್ ಪಕ್ಷಕ್ಕೆ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಸಾಮರಸ್ಯದಲ್ಲಿ ನಂಬಿಕೆಯಿಲ್ಲ. ಬಿ.ಆರ್.ಅಂಬೇಡ್ಕರ್ ಅವರಿಗೆ ಅಗೌರವ ಸೂಚಿಸಿದೆ ಎಂದು ಹೇಳಿದರು.

Share News

About Shaikh BigTv

Check Also

ವೆಂಕಟಗಿರಿಕೋಟೆ ಗಲಾಟೆ 7 ಮಂದಿ ವಿರುದ್ಧ ಪ್ರಕರಣ

ಚಿಂತಾಮಣಿ: ನಗರದ ವೆಂಕಟಗಿರಿಕೋಟೆ ಬಡಾವಣೆಯಲ್ಲಿ ಏ.13ರಂದು ಸಂಜೆ ಕೈಕೈ ಮಿಲಾಯಿಸಿದವರನ್ನು ಗಸ್ತಿನಲ್ಲಿದ್ದ ಪೊಲೀಸರು ತಡೆದು ಬುದ್ಧಿ ಹೇಳಿದರೂ ಕೇಳದೆ ಮುಂದುವರಿದು …

Leave a Reply

Your email address will not be published. Required fields are marked *