Breaking News

ಮಹಾಕುಂಭಮೇಳಕ್ಕೆ ಡಿಜಿಟಲ್ ತಂತ್ರಜ್ಞಾನದ ಸ್ಪರ್ಶ: ಸರ್ಕಾರದಿಂದ ಸಿದ್ಧತೆ

ಪ್ರಯಾಗ್‌ರಾಜ್‌ : ಹನ್ನೆರಡು ವರ್ಷಕ್ಕೊಮ್ಮೆ ನಡೆಯುವ ಮಹಾಕುಂಭಮೇಳಕ್ಕೆ ಪ್ರಯಾಗ್‌ರಾಜ್‌ ನಗರ ಸಜ್ಜಾಗುತ್ತಿದೆ. ಉತ್ತರ ಪ್ರದೇಶ ಸರಕಾರ ಕಳೆದ ಐದಾರು ತಿಂಗಳಿನಿಂದಲೇ ಕುಂಭಮೇಳಕ್ಕಾಗಿ ತಯಾರಿ ನಡೆಸುತ್ತಿದ್ದು, ಈ ಸಲದ ಕುಂಭಮೇಳ ಸಂಪೂರ್ಣವಾಗಿ ಡಿಜಿಟಲ್‌ ತಂತ್ರಜ್ಞಾನದ ಸ್ಪರ್ಶದೊಂದಿಗೆ ನಡೆಯುತ್ತಿರುವುದು ವಿಶೇಷವಾಗಿದೆ.
ಭಕ್ತರಿಗೆ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಸೌಲಭ್ಯ ಕಲ್ಪಿಸಲು ಸರಕಾರ ಸಿದ್ಧತೆ ಮಾಡಿಕೊಂಡಿದೆ. ಸಾರಿಗೆ, ಭದ್ರತೆ, ವಸತಿ, ಪಾರ್ಕಿಂಗ್‌… ಹೀಗೆ ಪ್ರತಿಯೊಂದನ್ನು ಕೂಡ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಸಿದ್ಧಗೊಳಿಸಲಾಗಿದೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಕುಂಭಮೇಳದ ಯಶಸ್ವಿಗಾಗಿ ಹಗಲಿರುಳು ದುಡಿಯುತ್ತಿದೆ. ಹಿಂದೂ ಧರ್ಮದ ಅತ್ಯಂತ ಮಹತ್ವದ ಧಾರ್ಮಿಕ ಕಾರ್ಯಕ್ರಮ ಇದಾಗಿದ್ದು, ನಿರಂತರ ಒಂದೂವರೆ ತಿಂಗಳು ಪ್ರಯಾಗ್‌ರಾಜ್‌ಗೆ ವಿಶ್ವದೆಲ್ಲೆಡೆಯಿಂದ ಜನಸಾಗರವೇ ಹರಿದುಬರಲಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಯೋಗಿ ಸರ್ಕಾರ ಸಕಲ ಸಿದ್ಧತೆಗಳೊಂದಿಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.
ಮಹಾಕುಂಭಮೇಳ 12 ವರ್ಷಗಳಿಗೊಮ್ಮೆ ನಡೆಯುವ ಜಗತ್ತಿನ ಅತಿದೀರ್ಘ ಮತ್ತು ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ. ಈ ಸಲದ ಕುಂಭಮೇಳಕ್ಕಾಗಿ ಉತ್ತರ ಪ್ರದೇಶ ಸರ್ಕಾರ ನಾಲ್ಕು ತಾಲೂಕುಗಳನ್ನು ಒಳಗೊಂಡ ‘ಮಹಾಕುಂಭ ನಗರವನ್ನು’ ಹೊಸ ಜಿಲ್ಲೆಯಾಗಿ ಘೋಷಿಸಿದೆ. ಜ.14ರಿಂದ ಫೆ.26ರವರೆಗೆ ಮಹಾ ಕುಂಭಮೇಳ ನಡೆಯಲಿದೆ. ಗಂಗಾ, ಯಮುನಾ ಹಾಗೂ ಸರಸ್ವತಿ ನದಿಗಳು ಸಂಗಮಿಸುವ ತ್ರಿವೇಣಿ ಸಂಗಮದಲ್ಲಿ ಮಿಂದೇಳುವುದೇ ಕುಂಭಮೇಳ. 12 ವರ್ಷಗಳಿಗೊಮ್ಮೆ ಪ್ರಯಾಗ್‌ರಾಜ್, ಹರಿದ್ವಾರ, ಉಜ್ಜಯಿನಿ ಹಾಗೂ ನಾಸಿಕ್‌ನಲ್ಲಿ ಮಹಾಕುಂಭಮೇಳ ನಡೆಸಲಾಗುತ್ತದೆ. ಈ ಬಾರಿ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭಮೇಳ ನಡೆಯಲಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *