Breaking News

ಕೇಂದ್ರ ಸರ್ಕಾರ ರಾಜ್ಯಕ್ಕೆ ವಸೂಲಿ ಆಗುವ ತೆರಿಗೆಯ ಅರ್ಧಭಾಗ ನೀಡಬೇಕು: ಸಿಎಂ ಸಿದ್ದರಾಮಯ್ಯ

ಕಲಬುರಗಿ: ಕೇಂದ್ರ ಸರ್ಕಾರ ರಾಜ್ಯಕ್ಕೆ ಸರಿಯಾದ ಪಾಲು ನೀಡುತ್ತಿಲ್ಲ. ವಸೂಲಿ ಆಗುವ ತೆರಿಗೆಯಲ್ಲಿ ಅರ್ಧಭಾಗ ವಾಪಸ್ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ.
ಒಟ್ಟು ತೆರಿಗೆ ಸಂಗ್ರಹದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಒಟ್ಟು 4.50 ಲಕ್ಷ ಕೋಟಿ ರೂ.ಗಳನ್ನು ಕೇಂದ್ರಕ್ಕೆ ನಮ್ಮಿಂದ ಸಂಗ್ರಹವಾಗುತ್ತಿದೆ. ಆದರೆ ನಮಗೆ ವಾಪಸ್ ನೀಡುತ್ತಿರುವುದು ಒಂದು ರೂಪಾಯಿಗೆ ಹದಿಮೂರು ಪೈಸೆ ಮಾತ್ರ. ಅರ್ಧಭಾಗ ತೆರಿಗೆಯಲ್ಲಿ ವಾಪಸ್ ನೀಡುವುದಾದರೆ 2 ಲಕ್ಷ ಕೋಟಿ ರೂ.ಗೂ ಅಧಿಕ ಮೊತ್ತವನ್ನು ನೀಡಬೇಕಾಗುತ್ತದೆ ಎಂದರು.
ಕೇಂದ್ರ ಸರ್ಕಾರ ಮೊದಲಿನಿಂದಲೂ ಈ ರೀತಿಯ ಅನ್ಯಾಯವನ್ನು ಮಾಡಿಕೊಂಡೇ ಬಂದಿದೆ. ಇತ್ತೀಚಿನ ವರ್ಷಗಳಲ್ಲಿ ಸೂಕ್ತ ನ್ಯಾಯ ದೊರಕಿಸಿಲ್ಲ. ನಮಗಾಗುತ್ತಿರುವ ಅನ್ಯಾಯದ ಬಗ್ಗೆ ಬಿಜೆಪಿಯವರು ಬಾಯಿ ಬಿಡುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *