ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ರೈತರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಭೆ ನಡೆಸಿದರು.
ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯಲ್ಲಿ ಕೆಐಎಡಿಬಿ ವತಿಯಿಂದ 13 ಹಳ್ಳಿಗಳ ವ್ಯಾಪ್ತಿಯಲ್ಲಿ 1,777 ಎಕರೆ ಜಮೀನು ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದ್ದುಈಗಾಗಲೇ ಮೂರು ಬಾರಿ ಭೂಸ್ವಾಧೀನ ಪ್ರಕ್ರಿಯೆ ನಡೆಸಿರುವುದರಿಂದ ಹೊಸದಾಗಿ ಭೂಸ್ವಾಧೀನ ನಡೆಸಬಾರದು. ಭೂಸ್ವಾಧೀನ ಪ್ರಕ್ರಿಯೆ ಕೈಬಿಡಬೇಕು ಎನ್ನುವ ರೈತರ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ 430 ಎಕರೆ ಜಮೀನು ಭೂಸ್ವಾಧೀನಕ್ಕೆ ಈಗಾಗಲೇ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಅಂತಿಮ ಅಧಿಸೂಚನೆ ಆಗಿರುವ ಜಮೀನು ವಾಪಸು ಪಡೆಯಲು ಸಾಧ್ಯವಿಲ್ಲ.
ಸರ್ಕಾರ ರೈತರ ಪರವಾಗಿದ್ದು ಈ ವಿಷಯದ ಕುರಿತು ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದರು.
ಸಚಿವರಾದ ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ, ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ ನಾರಾಯಣಸ್ವಾಮಿ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ರೈತ ಪ್ರತಿನಿಧಿಗಳು ಉಪಸ್ಥಿತರಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

