Breaking News

ಅಮಿತ್ ಶಾ ಹೇಳಿಕೆ ಖಂಡಿಸಿ ದಲಿತಪರ ಸಂಘಟನೆಯಿಂದ ಕಲಬುರಗಿ ಮತ್ತು ಗದಗ ಬಂದ್ ಗೆ ಕರೆ

ಕಲಬುರಗಿ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ಖಂಡಿಸಿ ದಲಿತ ಪರ ಸಂಘಟನೆಗಳು ಇಂದು ಕಲಬುರಗಿ ಮತ್ತು ಗದಗ-ಬೆಟಗೇರಿ ಬಂದ್ ಗೆ ಕರೆ ನೀಡಲಾಗಿದ್ದು, ಪ್ರತಿಭಟನಾಕಾರರು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಂಬೇಡ್ಕರ್ ಅಂತಾ ಹೇಳುವುದು ಕೆಲವರಿಗೆ ಫ್ಯಾಷನ್ ಆಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದರು. ಅಮಿತ್ ಶಾ ಅವರು ಅಂಬೇಡ್ಕರ್ ಕುರಿತಾಗಿ ನೀಡಿದ ಹೇಳಿಕೆ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಇಂದು ಕಲಬುರಗಿ ಹಾಗೂ ಗದಗ-ಬೆಟಗೇರಿ ಬಂದ್ ಗೆ ದಲಿತ ಸಂಘಟನೆಗಳು ಕರೆ ನೀಡಿವೆ. ವಿವಿಧ ದಲಿತಪರ ಸಂಘಟನೆಗಳಿಂದ ಗದಗ -ಬೆಟಗೇರಿ ಬಂದ್ ಗೆ ಕರೆ ನೀಡಲಾಗಿದ್ದು, ಜಿಲ್ಲಾ ಕಾಂಗ್ರೆಸ್ ಸಮಿತಿ ಕೂಡ ಬೆಂಬಲ ಸೂಚಿಸಿದೆ. ರೋಣಾ ಶಾಸಕ ಜೆ.ಎಸ್. ಪಾಟೀಲ್ ಬಂದ್ ಬೆಂಬಲಿಸಿ ಪತ್ರ ಬರೆದಿದ್ದಾರೆ.
ಅಮಿತ್ ಶಾ ಹೇಳಿಕೆ ಖಂಡಿಸಿ ವಿವಿಧ ದಲಿತ ಪರ ಸಂಘಟನೆಗಳಿಂದ ಇಂದು ಕಲಬುರಗಿ ಬಂದ್​ಗೆ ಕರೆ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜಿಗೆ ಡಿಡಿಪಿಐ ಸೂರ್ಯಕಾಂತ್ ರಜೆ ಘೋಷಿಸಿದ್ದಾರೆ. ಬಂದ್​ ಹಿನ್ನೆಲೆ ಇಂದು ಮದ್ಯ ಮಾರಾಟ ಕೂಡ ನಿಷೇಧಿಸಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *