ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ನ್ಯಾಶನಲ್ ಕಾನ್ಫರೆನ್ಸ್ (ಜೆಕೆಎನ್‌ಸಿ) ಕಾಂಗ್ರೆಸ್ ಮೈತ್ರಿಕೂಟದ ಹೊಸ ಸರ್ಕಾರ ಅಧಿಕಾರ ವಹಿಸಿಕೊಂಡು ಇಲ್ಲಿಗೆ ಎರಡು ತಿಂಗಳಾದರೂ ಹೊಸದಾಗಿ ಚುನಾಯಿತ ಶಾಸಕರು ಇನ್ನು ಕೂಡಾ ತಮ್ಮ ಮೊದಲ ಸಂಬಳಕ್ಕಾಗಿ ಕಾಯುತ್ತಿದ್ದಾರೆ.
2019ರ ಆಗಸ್ಟ್‌ನಲ್ಲಿ ಸಂವಿಧಾನದ 370 ನೇ ವಿಧಿಯ ಅನ್ವಯ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗುದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ ಹಿಂಪಡೆದರಿಂದ ಈಗ ತಾಂತ್ರಿಕ ಸಮಸ್ಯೆಯಾಗಿದೆ. ಹೀಗಾಗಿ ಶಾಸಕರ ವೇತನ ತಡವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನು ವೇತನ ವಿಳಂಬವಾಗಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ವಿಧಾನಸಭೆಯ ಸ್ಫೀಕರ್ ಅಬ್ದುಲ್ ರಹೀಮ್ ರಾತರ್, ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಶಾಸಕರ ವೇತನದ ಕುರಿತು ಶೀಘ್ರವೇ ಸ್ಪಷ್ಟೀಕರಣ ನೀಡುವಂತೆ ಮನವಿ ಮಾಡಿದ್ಧಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

