Breaking News

ಬಿಬಿಎಂಪಿ ವ್ಯಾಪ್ತಿಯಲ್ಲಿ 67 ಸಾವಿರ ಇ-ಖಾತಾ ವಿತರಣೆ: ಮುನೀಶ್ ಮೌದ್ಗಿಲ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅಂತಿಮ ಇ-ಖಾತಾ ಪಡೆಯಲು 67 ಸಾವಿರ ಅರ್ಜಿಗಳು ಸ್ವೀಕೃತಗೊಂಡಿದ್ದು, ಎಲ್ಲ ಅರ್ಜಿಗಳನ್ನೂ ವಿಲೇವಾರಿ ಮಾಡಿ ಇ-ಖಾತಾಗಳನ್ನು ವಿತರಿಸಲಾಗಿದೆ ಎಂದುಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್‌ ಮೌದ್ಗಿಲ್‌ ತಿಳಿಸಿದರು.
ಎಂಟೂ ವಲಯಗಳ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ನಿತ್ಯ ಬರುವ ಅರ್ಜಿಗಳನ್ನು ನಿಗದಿತ ಸಮಯದೊಳಗಾಗಿ ವಿಲೇವಾರಿ ಮಾಡಲಾಗುತ್ತಿದೆ’ ಎಂದರು.
ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ಸುಸ್ತಿದಾರರ ವಲಯವಾರು ಪಟ್ಟಿ ಮಾಡಿ, ಅವರಿಂದ ತೆರಿಗೆ
ಯನ್ನು ವಸೂಲಿ ಮಾಡಬೇಕು. ವಾಣಿಜ್ಯ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ಬಾಕಿ ಆಸ್ತಿ ತೆರಿಗೆಯನ್ನು ಸಂಗ್ರಹಿಸಬೇಕು ಅಧಿಕಾರಿಗಳಿಗೆ ಸೂಚಿಸಿದರು.
ಬಿಬಿಎಂಪಿಯ ಸಹಾಯ 2.0, ಐಪಿಜಿಆರ್‌ಎಸ್, ಸಾಮಾಜಿಕ ಜಾಲತಾಣಗಳಲ್ಲಿ ಬರುವ ದೂರುಗಳನ್ನು ಆದ್ಯತೆ ಮೇರೆಗೆ ಇತ್ಯರ್ಥಪಡಿಸಬೇಕು ಎಂದು ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಆದೇಶಿಸಿದರು. ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ವಲಯ ಆಯುಕ್ತರು ಉಪಸ್ಥಿತರಿದ್ದರು.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *