ಡ್ರಗ್ಸ್ ಮುಕ್ತ ಅವಳಿ ನಗರ ನಿರ್ಮಾಣಕ್ಕೆ ಒತ್ತು ನೀಡಿ: ಪರಮೇಶ್ವರ
ಇತ್ತೀಚಿನ ದಿನಗಳಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಹುಬ್ಬಳ್ಳಿ ಧಾರವಾಡ ನಗರಗಳನ್ನು ಡ್ರಗ್ಸ್ ಮುಕ್ತ ಮಾಡಲು

ಪೊಲೀಸರು ಒತ್ತು ನೀಡಬೇಕಿದೆ. ಡ್ರಗ್ಸ್ ಸರಬರಾಜು ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅವರನ್ನು ಹತ್ತಿಕ್ಕುವ ಕೆಲಸಗಳು ಆಗಬೇಕಿದೆ. 2 ಸಾವಿರ ಜನರಲ್ಲಿ 800 ಜನರಿಗೆ ಪಾಸಿಟಿವ್ ಬಂದಿರುವುದು ಆತಂಕಕಾರಿ ವಿಷಯವಾಗಿದೆ. ಹೀಗಾಗಿ ವಿದ್ಯಾರ್ಥಿಗಳು ಡ್ರಗ್ಸ್ ಬಳಸದಂತೆ ತಿಳುವಳಿಕೆ ನೀಡಬೇಕಾಗಿದೆ. ಆ ನಿಟ್ಟಿನಲ್ಲಿ ಸರ್ಕಾರ ಡ್ರಗ್ಸ್ ವಿರುದ್ಧ ಯುದ್ಧವನ್ನೆ ಸಾರಿದೆ. ಸೈಬರ್ ಕ್ರೈಂ ಪ್ರಕರಣಗಳು ಹೆಚ್ಚಾಗುತ್ತಿವೆ. ಸೈಬರ್ ಅಪರಾಧಗಳಿಗೆ ಕಡಿವಾಣ ಹಾಕಲಾಗುವುದು ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

