Breaking News

ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ, ಪಂಗಡದ ಉದ್ದಿಮೆದಾರರು ಹೊಸದಾಗಿ ಜವಳಿ ಘಟಕ ಸ್ಥಾಪಿಸಲು ಅರ್ಜಿ ಆಹ್ವಾನ

ಬೆಂಗಳೂರು: ಕೈಮಗ್ಗ ಮತ್ತು ಜವಳಿ ಇಲಾಖೆಯು ನೇಕಾರರ ವಿಶೇಷ ಪ್ಯಾಕೇಜ್ ಯೋಜನೆ ಎಸ್‌ಸಿಎಸ್‌ಪಿ/ಟಿಎಎಸ್‌ಪಿ ಯೋಜನೆಯಡಿ ಜವಳಿ ಕ್ಷೇತ್ರಕ್ಕೆ ಸಂಬಂಸಿದಂತೆ ಸಣ್ಣ ಮತ್ತು ಅತಿಸಣ್ಣ (ಎಸ್‌ಎಂಇ) ಘಟಕಗಳ ಸ್ಥಾಪನೆಗೆ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಉದ್ದಿಮೆದಾರರು ಹೊಸದಾಗಿ ಜವಳಿ ಘಟಕ ಸ್ಥಾಪಿಸಲು ಅರ್ಜಿ ಆಹ್ವಾನಿಸಿದೆ.
ಆಸಕ್ತ ಜವಳಿ ಉತ್ಪಾದನಾ ಉದ್ದಿಮೆದಾರರು ನಿಗದಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಮಂಜುನಾಥ ಟವರ‍್ಸ್, 2ನೇ ಮಹಡಿ, ಗಾಂಧಿನಗರ, 1ನೇ ಮುಖ್ಯರಸ್ತೆ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯ ದಾಖಲೆಗಳನ್ನು ಲಗತ್ತಿಸಿ ಡಿ. 31 ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.:08182-223405 ನ್ನು ಸಂಪರ್ಕಿಸುವುದು.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *