Breaking News

ಜಮ್ಮುವಿನಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮ: ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಜಮ್ಮು-ಕಾಶ್ಮೀರದಲ್ಲಿ ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗ ಯೋಧರಾದ ದಯಾನಂದ ತಿರಕಣ್ಣವರ, ಅನೂಪ್ ಹಾಗೂ ಮಹೇಶ್ ಮರಿಗೊಂಡ ಅವರು ಹುತಾತ್ಮರಾದ ಸುದ್ದಿ ತಿಳಿದು ನೋವಾಯಿತು.
ಮೃತ ಯೋಧರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬವರ್ಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ದೇಶ ಸೇವೆಗಾಗಿ ಜೀವ ಮುಡಿಪಿಟ್ಟ ಈ ಹುತಾತ್ಮ ಯೋಧರ ತ್ಯಾಗ, ಬಲಿದಾನವನ್ನು ನಾಡು ಸದಾಕಾಲ ಸ್ಮರಿಸಲಿದೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಮೃತ ಯೋಧರನ್ನು ಬೆಳಗಾವಿ ಬಳಿಯ ಸಾಂಬ್ರಾ ಗ್ರಾಮದ ಯೋಧ ಸುಬೇದಾರ್ ದಯಾನಂದ ತಿರಕಣ್ಣವರ (45), ಕುಂದಾಪುರ ಬಳಿಯ ಕೋಟೇಶ್ವರ ಬಿಜಾಡಿಯ ಅನೂಪ್ (33) ಮಹಾಲಿಂಗಪುರದ 25 ವರ್ಷದ ಮಹೇಶ್ ಮರಿಗೊಂಡ ಎಂದು ಗುರುತಿಸಲಾಗಿದೆ, ಹಾಗೂ ದುರಂತದಲ್ಲಿ ಮಹಾರಾಷ್ಟ್ರದ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *