ಭೋಪಾಲ್: ಮಧ್ಯಪ್ರದೇಶದಲ್ಲಿ ಮೋಹನ್ ಯಾದವ್ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದ್ದಕ್ಕೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದರು.
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದಲ್ಲಿ ಕೆನ್-ಬೆಟ್ವಾ ನದಿ ಜೋಡಣೆ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ಮಾಡಿದ ಅವರು, ಕಳೆದ ಒಂದು ವರ್ಷದಲ್ಲಿ ಅಭಿವೃದ್ಧಿಗೆ ಹೊಸ ಗತಿ ಸಿಕ್ಕಿದೆ.
ಮೋಹನ್ ಯಾದವ್ ನೇತೃತ್ವದ ಬಿಜೆಪಿ ಸರ್ಕಾರ ಒಂದು ವರ್ಷ ಪೂರೈಸಿದೆ. ಮಧ್ಯಪ್ರದೇಶದ ಜನತೆಗೆ ಬಿಜೆಪಿ ಕಾರ್ಯಕರ್ತರಿಗೆ ನಾನು ಅಭಿನಂದಿಸುತ್ತೇನೆ ಎಂದರು.
ಉತ್ತಮ ಆಡಳಿತವೇ ಬಿಜೆಪಿಯ ಗುರುತಾಗಿದೆ ಇಂದು ಕೋಟ್ಯಂತರ ರೂ.ಗಳ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿ ಶಂಕುಸ್ಥಾಪನೆ ಮಾಡಲಾಗಿದೆ. ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಅಂಗವಾಗಿ ಈ ಯೋಜನೆಗಳಿಗೆ ಚಾಲನೆ ನೀಡುತ್ತಿರುವುದ್ದಕ್ಕೆ ರಾಜ್ಯದ ಜನತೆಯನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.
ಇಂದು ಇಡೀ ವಿಶ್ವವೇ ಕ್ರಿಸ್‌ಮಸ್ ಆಚರಿಸುತ್ತಿದೆ. ದೇಶ ಮತ್ತು ವಿಶ್ವದ ಕ್ರೈಸ್ತ ಸಮುದಾಯಕ್ಕೆ ಸೇರಿದ ಜನರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ ಎಂದು ಈ ವೇಳೆ ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

