ನವದೆಹಲಿ: ದೇಶದಾದ್ಯಂತ ಸುಮಾರು ಎಂಟು ಕೋಟಿ ರೈತರು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಿಂದ ಪ್ರಯೋಜನ ಪಡೆಯುತ್ತಿದ್ದರೆ, ಇದರ ಬೆನ್ನಲ್ಲೇ ನಕಲಿ ಪಿಎಂ ಕಿಸಾನ್ ಆಯಪ್ ಮತ್ತೆ ಸಕ್ರಿಯವಾಗಿದೆ.
ರೈತರನ್ನೇ ಗುರಿಯಾಗಿಸಿಕೊಂಡು ಪಿಎಂ ಕಿಸಾನ್ ಯೋಜನೆಯ ಮೊಬೈಲ್ ಅಪ್ಲಿಕೇಶನ್ ಎಂದು ಹೇಳಿಕೊಳ್ಳುವ ವಂಚನೆಯ ಲಿಂಕ್ ಅನ್ನು ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಸಕ್ರಿಯವಾಗಿ ಶೇರ್ ಆಗುತ್ತಿದ್ದು, ಈ ಲಿಂಕ್ ಅನ್ನು ಕ್ಲಿಕ್ ಮಾಡದಂತೆ ಪೊಲೀಸರು ರೈತರಿಗೆ ಎಚ್ಚರಿಕೆ ನೀಡಿದ್ದಾರೆ.
ಪ್ರಧಾನ ಮಂತ್ರಿ ಕಿಸಾನ್ ಯೋಜನೆಯ ಅಧಿಕೃತ ವೆಬ್‌ಸೈಟ್ ಹಾಗೂ ಆಯಪ್ ಎಂದು ಹೇಳಿಕೊಂಡು ವಂಚಕರು ಎಪಿಕೆ ಲಿಂಕ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಲಿಂಕ್ ಅನ್ನು ಕ್ಲಿಕ್ ಮಾಡಿದ ನಂತರ, ಅಪ್ಲಿಕೇಶನ್ ಡೌನ್‌ಲೋಡ್ ಆಗುತ್ತದೆ, ಫೋನ್ ಹ್ಯಾಕ್ ಆಗಿ ಎಲ್ಲಾ ದಾಖಲೆ, ಹಣ ಎಲ್ಲವು ವಂಚಕರ ಕೈವಶವಾಗುತ್ತದೆ.
ಇದೀಗ ಈ ಬಗ್ಗೆ ಜಾಗೃತಿ ಮೂಡಿಸಲು ಪೊಲೀಸರು ಮುಂದಾಗಿದ್ದು, ಪಿಎಂ ಕಿಸಾನ್ ಆಯಪ್ ಎಂದು ಹೇಳಿಕೊಳ್ಳುವ ಎಪಿಕೆ ಲಿಂಕ್‌ಗಳನ್ನು ಕ್ಲಿಕ್ ಮಾಡಿ ಮತ್ತು ಅವುಗಳನ್ನು ಸಾಮಾಜಿಕ ಮಾಧ್ಯಮ ಅಥವಾ ವಾಟ್ಸಾಪ್‌ನಲ್ಲಿ ಹಂಚಿಕೊಳ್ಳದಂತೆ ಸಲಹೆ ನೀಡಿದ್ದಾರೆ.
ಸರ್ಕಾರಿ ಯೋಜನೆಗಳಿಗೆ ಸಂಬಂಧಿಸಿದ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಲು ಅಧಿಕೃತ ವೆಬ್‌ಸೈಟ್ ಗಳನ್ನೇ ಬಳಸಿ ಎಂದು ಸೂಚಿಸಿದ್ದಾರೆ. ಒಂದು ವೇಳೆ ಅಂತಹ ಲಿಂಕ್ ಬಂದರೆ ಕೂಡಲೇ 1930 ಗೆ ಕರೆ ಮಾಡಿ ಮಾಹಿತಿ ನೀಡಿ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

