ಕೊಪ್ಪಳ: ಕೊಪ್ಪಳದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದಿದೆ. ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ವಾಕ್ ಇನ್ ಸಂದರ್ಶನ ಆಯೋಜನೆ ಮಾಡಲಾಗಿದೆ. ಇದರಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕವನ್ನು ನಿಗದಿಗೊಳಿಸಿಲ್ಲ.
ಅಭ್ಯರ್ಥಿಗಳು ಸೂಕ್ತ ದಾಖಲೆಗಳ ಜೊತೆ ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಡಿಸೆಂಬರ್ 27ರಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30ರ ತನಕ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ವಾಕ್ ಇನ್ ಸಂದರ್ಶನ ಆಯೋಜನೆ ಮಾಡಿದೆ.
ಈ ವಾಕ್ ಇನ್ ಸಂದರ್ಶನದಲ್ಲಿ ವಿವಿಧ ಖಾಸಗಿ ಸಂಸ್ಥೆಗಳು ಪಾಲ್ಗೊಳ್ಳಲಿದ್ದು, ತಮ್ಮಲ್ಲಿನ ಖಾಲಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ. ಈ ಸಂದರ್ಶನದಲ್ಲಿ ಪಿಯುಸಿ, ತತ್ಸಮಾನ, ಯಾವುದೇ ಪದವಿ ಪಡೆದಿರುವ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.
ನೇರ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ 18 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲಾ ಪ್ರಮಾಣ ಪತ್ರಗಳು 3 ಪ್ರತಿಗಳೊಂದಿಗೆ ಮತ್ತು ಆಧಾರ್ ಕಾರ್ಡ್ ಪ್ರತಿ, ಬಯೋಡಾಟಾ ಹಾಗೂ 2 ಪಾಸ್ ಪೋರ್ಟ್ ಅಳತೆಯ ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಿ. ಕರೆ ಮಾಡಲು ದೂರವಾಣಿ ಸಂಖ್ಯೆಗಳು 08539-220859.
bigtvnews | Hubli Dharwad News | Kannada News | Karnataka News Hubli News | News In Hubli | Local news

