Breaking News

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ: ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ

ಬೆಂಗಳೂರು : ಭಾರತದ ಮಾಜಿ ಪ್ರಧಾನ ಮಂತ್ರಿಗಳಾದ ಡಾ. ಮನಮೋಹನ್ ಸಿಂಗ್ ಇವರ ನಿಧನಕ್ಕೆ ರಾಜ್ಯ ಸರ್ಕಾರವು ತೀವು ಸಂತಾಪ ವ್ಯಕ್ತಪಡಿಸಿದ್ದು, ದಿವಂಗತರ ಗೌರವಾರ್ಥವಾಗಿ ದಿನಾಂಕ:27.12.2024 ರಂದು ಶುಕ್ರವಾರ ರಾಜ್ಯದಾದ್ಯಂತ ಸಾರ್ವಜನಿಕ ಸರ್ಕಾರಿ ಕಚೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ ಹಾಗೂ ಸರ್ಕಾರಿ ಸ್ವಾಮ್ಯದ ಅಂಗ ಸಂಸ್ಥೆಗಳು ಒಳಗೊಂಡಂತೆ ಸಾರ್ವಜನಿಕ ರಜೆ ಘೋಷಿಸಿದೆ.
ದಿನಾಂಕ:26.12.2024 ರಿಂದ ದಿನಾಂಕ:01.01.2025 ರವರೆಗೆ (ಎರಡು ದಿನಗಳು ಸೇರಿದಂತೆ) ಏಳು ದಿನಗಳು ರಾಜ್ಯಾದ್ಯಂತ ಶೋಕವನ್ನು ಆಚರಿಸಲಾಗುವುದು. ಈ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಮನೋರಂಜನಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ನಿಯತವಾಗಿ ಹಾರಿಸಲ್ಪಡುವ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು.
ಸದರಿ ಆದೇಶವು ನೆಗೋಷಿಯಬಲ್ ಇನ್ಸುಮೆಂಟ್ ಆಕ್ಟ್ 1881 ರ ಪ್ರಕಾರವು ಕೂಡಾ ಸಾರ್ವಜನಿಕ ರಜೆಯೆಂದು ಘೋಷಿಸಲಾಗಿದೆ.

Share News

About BigTv News

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *