ನವದೆಹಲಿ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್ ಅವರು ನಿನ್ನೆ (ಡಿಸೆಂಬರ್ 26) ನಿಧನರಾಗಿದ್ದಾರೆ. ನವದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮನಮೋಹನ್ ಸಿಂಗ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಎಲ್ಲಾ ಪಕ್ಷದ ರಾಜಕೀಯ ಗಣ್ಯರು ಏಮ್ಸ್ ಆಸ್ಪತ್ರೆಯತ್ತ ದೌಡಾಯಿಸುತ್ತಿದ್ದಾರೆ. ಇನ್ನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ರಾಜಕೀಯ ನಾಯಕರು ಧೀಮಂತ ನಾಯಕ ಮನಮೋಹನ್ ಸಿಂಗ್ ಅವರ ನಿಧಾನಕ್ಕೆ ಸಂತಾಪ ಸೂಚಿಸಿದ್ದು, ಡಾ ಮನಮೋಹನ್ ಸಿಂಗ್ ಅವರ ಕೊಡುಗೆ ಕೊಂಡಾಡಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಮನಮೋಹನ್ ಸಿಂಗ್ ಆಡಳಿತರ ಬಗ್ಗೆ ಕೊಂಡಾಡಿ ಸಂತಾಪ ಸೂಚಿಸಿದ್ದಾರೆ. ಭಾರತದ ಮಾಜಿ ಪ್ರಧಾನಿಯವರ ನಿಧನದಿಂದ ತೀವ್ರ ದುಃಖವಾಗಿದೆ. ಡಾ. ಮನಮೋಹನ್ ಸಿಂಗ್ಜಿ ಕಷ್ಟದ ಸಮಯದಲ್ಲಿ ಭಾರತದ ಆರ್ಥಿಕತೆಯನ್ನು ಪುನರ್ನಿರ್ಮಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅವರ ಸೇವೆ ಮತ್ತು ಬುದ್ಧಿವಂತಿಕೆಗಾಗಿ ಅವರು ಮೆಚ್ಚುಗೆಗೆ ಪಾತ್ರರಾಗಿದ್ದರು. ಭಾರತದ ಪ್ರಗತಿಗೆ ಅವರ ಕೊಡುಗೆ ಸದಾ ಸ್ಮರಣೀಯ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.
ಭಾರತದ ಅತ್ಯಂತ ಪ್ರತಿಷ್ಠಿತ ನಾಯಕರಲ್ಲಿ ಒಬ್ಬರಾಗಿದ್ದರು. ಮನಮೋಹನ್ ಸಿಂಗ್ ಹೆಸರಾಂತ ಅರ್ಥಶಾಸ್ತ್ರಜ್ಞರಾಗಿದ್ದರು. ಹಣಕಾಸು ಸಚಿವರಾಗಿ ಸೇರಿ ವಿವಿಧ ಸರ್ಕಾರಿ ಹುದ್ದೆಗಳಲ್ಲಿ ಸೇವೆ ದೇಶದ ಆರ್ಥಿಕತೆ ಬೆಳೆಯಲು ಭದ್ರವಾದ ಬುನಾದಿ ಹಾಕಿದ್ದರು . ಅವರ ಜೊತೆ ಸಂಸತ್ತಿನಲ್ಲಿ ಕಳೆದ ದಿನಗಳು ಕಣ್ಣಿಗೆ ಕಟ್ಟಿದಂತಿದೆ ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

