ಮಂಡ್ಯ: ಕೇಂದ್ರ ಸರ್ಕಾರದ ವಿವಿಧ ಯೋಜನೆಗಳಡಿ ವಿವಿಧ ವರ್ಗಗಳ ಜನರಿಗೆ ಆರ್ಥಿಕ ಶಕ್ತಿ ತುಂಬುವ ನಿಟ್ಟಿನಲ್ಲಿ ಹಲವಾರು ಯೋಜನೆಗಳಿವೆ. ಅವುಗಳಿಗೆ ಸಂಬಂಧಿಸಿದಂತೆ ಪ್ರಸ್ತಾವನೆಯನ್ನು ಸಲ್ಲಿಸಿದರೆ ನಿರುದ್ಯೋಗ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಕ್ರಮ ವಹಿಸುವುದಕ್ಕೆ ಸಿದ್ಧನಿದ್ದೇನೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿಯ ಕಾವೇರಿ ಸಭಾಂಗಣದಲ್ಲಿ ಸಂಸದ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿಯವರು ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ವಲಯ, ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ನಿರುದ್ಯೋಗಿ ಮಹಿಳೆಯರಿಗೆ, ಯುವಕರಿಗೆ ಸ್ವಾವಲಂಬಿ ಜೀವನ ಕಲ್ಪಿಸಿಕೊಡುವುದಕ್ಕೆ ಕೇಂದ್ರದ ಯೋಜನೆಗಳಲ್ಲಿ ಸಾಕಷ್ಟು ಅವಕಾಶಗಳಿವೆ. ಅವುಗಳನ್ನು ದೊರಕಿಸಿಕೊಡುವುದಕ್ಕೆ ಅಧಿಕಾರಿಗಳು ಬದ್ಧತೆ ಪ್ರದರ್ಶಿಸಬೇಕು. ಪಶುಪಾಲನೆ, ಮೀನುಗಾರಿಕೆ ಇಲಾಖೆಯಡಿ ದೊರೆಯುವ ಸಾಲ ಸೌಲಭ್ಯಗಳು, ಬೀದಿ ಬದಿ ವ್ಯಾಪಾರಿಗಳಿಗೆ ೨೦ ಸಾವಿರ ರು.ವರೆಗೆ ಸಾಲ ಸೌಲಭ್ಯಗಳನ್ನು ಒದಗಿಸುವುದಕ್ಕೆ ಅವಕಾಶಗಳಿವೆ. ಜಿಲ್ಲೆಯಲ್ಲಿರುವ ಅರ್ಹ ಫಲಾನುಭವಿಗಳನ್ನು ಗುರುತಿಸಿ ಪ್ರಸ್ತಾವನೆ ಸಲ್ಲಿಸಿದರೆ ಹೆಚ್ಚಿನ ಹಣ ಬಿಡುಗಡೆ ಮಾಡಿಸುವುದಾಗಿ ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

