Breaking News

ಬೆಳಗಾವಿಯಲ್ಲಿ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು, ರಾಜ್ಯದಲ್ಲಿ ಒಂದು ವಾರ ಶೋಕಾಚರಣೆ: ಡಿಸಿಎಂ ಡಿಕೆಶಿ

ಬೆಳಗಾವಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಇಂದು ನಡೆಯಬೇಕಿದ್ದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ರದ್ದು ಮಾಡಲಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಬೆಳಗಾವಿಯ ಸರ್ಕಿಟ್ ಹೌಸ್ ಅಲ್ಲಿ ಗುರುವಾರ ರಾತ್ರಿ ನಡೆದ ತುರ್ತು ಮಾಧ್ಯಮ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಮಾವೇಶ ನಡೆಯಬೇಕಿದ್ದ ವೇದಿಕೆಯಲ್ಲಿಯೇ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಭೆ ಏರ್ಪಡಿಸಲಾಗಿದೆ.
ಮುಖ್ಯಮಂತ್ರಿಗಳು ಹಾಗೂ ಪಕ್ಷದ ವರಿಷ್ಟರ ಬಳಿ ಮಾತನಾಡಿ ಮುಂದಿನ ಕಾರ್ಯಕ್ರಮಗಳ ಬಗ್ಗೆ ಆದಷ್ಟು ಬೇಗ ತಿಳಿಸಲಾಗುವುದು ಎಂದರು.
ಇಂದು ಸರ್ಕಾರದ ಹಾಗೂ ಪಕ್ಷದ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ. ಸರ್ಕಾರಿ ರಜೆ ಘೋಷಣೆ ಮಾಡಲಾಗಿದ್ದು, ರಾಜ್ಯದಲ್ಲಿ ಒಂದು ವಾರಗಳ ಕಾಲ ಶೋಕಾಚರಣೆ ಮಾಡಲಾಗುವುದು ಎಂದು ಹೇಳಿದರು.
ಶ್ರದ್ಧಾಂಜಲಿ ಕಾರ್ಯಕ್ರಮಕ್ಕೆ ಹೊರಜಿಲ್ಲೆಗಳಿಂದ ಜನರು ಆಗಮಿಸುವುದು ಬೇಡ. ಬದಲಾಗಿ ಬೆಳಗಾವಿಯಲ್ಲಿ ಇರುವವರು ಶ್ರದ್ಧಾಂಜಲಿ ಸಭೆಯಲ್ಲಿ ಭಾಗವಹಿಸಿ ಗೌರವ ಸಲ್ಲಿಸಬೇಕು. ಹೊರ ಊರುಗಳಿಂದ ಹೊರಡುವ ಅನೇಕ ಕಾರ್ಯಕರ್ತರು ಹಾಗೂ ನಾಯಕರುಗಳು ಬೆಳಗಾವಿಗೆ ಬರುವುದು ಬೇಡ. ಈಗಾಗಲೇ ಹೊರ ಊರುಗಳಿಂದ ಬಂದಿರುವವರು ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಹೊರ ಊರುಗಳಿಂದ ಬಂದಿರುವ ಸಂಸದರು ಹಾಗೂ ನಾಯಕರುಗಳ ಹೊಣೆ ಹೊತ್ತಿರುವ ಉಸ್ತುವಾರಿ ಸಮಿತಿಯವರು ಅವರುಗಳು ತೆರಳುವ ತನಕ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ನಿಮ್ಮ ಜವಾಬ್ದಾರಿ ಮರೆಯಬಾರದು ಎಂದು ತಿಳಿಸಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *