Breaking News

ದೆಹಲಿಯ ನಿವಾಸಕ್ಕೆ ಮನಮೋಹನ್ ಸಿಂಗ್ ಪಾರ್ಥಿವ ಶರೀರ: ಅಂತಿಮ ದರ್ಶನ ಪಡೆದ ಕೇಂದ್ರ ಸಚಿವ ಅಮಿತ್ ಶಾ

ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ದೆಹಲಿಯ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿವಾಸಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅಗಮಿಸಿದ್ದು, ಮನಮೋಹನ್ ಸಿಂಗ್ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.
ಡಿಸೆಂಬರ್ 27 ರಂದು ನಡೆಯಬೇಕಿದ್ದ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಅಲ್ಲದೆ, ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಮತ್ತೊಂದೆಡೆ, ಕಾಂಗ್ರೆಸ್ ಕೂಡ ಇಂದು ತನ್ನ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *