Breaking News

ಅಮಿತ್‌ ಶಾ ಅವಹೇಳನಕಾರಿ ಹೇಳಿಕೆ ಖಂಡಿಸಿ ಜ.6 ರಂದು ಕೊಪ್ಪಳ ಬಂದ್ ಗೆ ಕರೆ

ಕೊಪ್ಪಳ: ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ್ದರಿಂದ ಜನವರಿ 6ರಂದು ಕೊಪ್ಪಳ ಬಂದ್ ಗೆ ಕರೆ ‌ನೀಡಲಾಗಿದೆ ಎಂದು ಸಂವಿಧಾನ ಸಂರಕ್ಷಣಾ ಸಮಿತಿಯ ಜಿಲ್ಲಾ ಸಮಿತಿ ಮುಖಂಡರು ತಿಳಿಸಿದ್ದಾರೆ.
ಸಮಿತಿಯ ಮುಖಂಡರಾದ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು, ಹನುಮೇಶ ಕಡೆಮನಿ, ಟಿ.ರತ್ನಾಕರ, ಈಶಪ್ಪ ಶಿರೂರು ಹಾಗೂ ಕೆ.ಎಸ್. ಮೈಲಾರಪ್ಪ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಕೇಂದ್ರ ಸಂಸತ್ತಿನ ಅಧಿವೇಶನದಲ್ಲಿ ನಡೆದ ಚರ್ಚೆ ವೇಳೆ ಅಮಿತ್ ಶಾ ಅವಮಾನ ಮಾಡಿದ್ದಾರೆ. ಅವರನ್ನು ಸಂಪುಟದಿಂದ ವಜಾ ಮಾಡಿ ದೇಶದಿಂದ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ಕೊಪ್ಪಳ ಬಂದ್ ಗೆ ಅಹಿಂದ, ಅಲ್ಪ ಸಂಖ್ಯಾತರ ಸಂಘಟನೆಗಳು ಹಾಗೂ ಬಿ.ಆರ್. ಅಂಬೇಡ್ಕರ್ ಅವರ ಅನುಯಾಯಿಗಳು ಪಾಲ್ಗೊಳ್ಳಲಿದ್ದಾರೆ. ಅಂದು ವಾಹನಗಳ ಸಂಚಾರ ಹಾಗೂ ವ್ಯಾಪಾರ ವಹಿವಾಟು ಬಂದ್ ಆಗಲಿದೆ ಎಂದರು.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *