Breaking News

ಕೆಪಿಎಸ್‌ಸಿ ಯಿಂದ ಡಿ.29 ರಂದು ಪ್ರೊಬೇಷನರ್ ಗ್ರೂಪ್ ಎ ಮತ್ತು ಬಿ ಹುದ್ದೆಗಳ ಪರೀಕ್ಷೆ

ಕೊಪ್ಪಳ: ಕರ್ನಾಟಕ ಲೋಕಸೇವಾ ಆಯೋಗದಿಂದ ಡಿಸೆಂಬರ್ 29 ರಂದು ಬೆಳ್ಳಿಗೆ 10 ರಿಂದ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2 ರಿಂದ ಸಂಜೆ 4 ಗಂಟೆಯವರೆಗೆ ಕೊಪ್ಪಳ ತಾಲ್ಲೂಕಿನಲ್ಲಿ ನಡೆಯಲಿರುವ ಗೆಜೆಟೆಡ್ ಪ್ರೋಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪರೀಕ್ಷೆಗಳು ಸುಗಮ ಹಾಗೂ ಶಾಂತಿಯುತವಾಗಿ ನಡೆಯುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ಸುತ್ತಲಿನ 200ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕೇಂದ್ರಗಳ ವಿವರ: ಕೊಪ್ಪಳದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪ್ರೌಢ ಶಾಲೆ ವಿಭಾಗ, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ (ಮಹಿಳಾ) ಕಾಲೇಜು, ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಶ್ರೀ ಗವಿಸಿದ್ದೇಶ್ವರ ಪದವಿ ಕಾಲೇಜು, ಶ್ರೀ ಗವಿಸಿದ್ದೇಶ್ವರ ಪದವಿ ಪೂರ್ವ ಕಾಲೇಜು, ಕಾಳಿದಾಸ ಪ್ರೌಢ ಶಾಲೆ, ಶ್ರೀ ಗವಿಸಿದ್ದೇಶ್ವರ ಕಂಫೋಸಿಟ್ ಪ್ರೌಢ ಶಾಲೆ, ಲಯನ್ಸ್ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಗದಗ ರಸ್ತೆಯ ನ್ಯೂ ಎಕ್ಸಲೆಂಟ್ ಪಬ್ಲಿಕ್ ಸ್ಕೂಲ್, ಭಾಗ್ಯನಗರದ ನ್ಯಾಷನಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ, ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢ ಶಾಲೆ ವಿಭಾಗ), ನವಚೇತನ ಪಿಯು ಕಾಲೇಜು, ಟಣಕನಕಲ್‍ನ ಆದರ್ಶ ವಿದ್ಯಾಲಯ, ದದೇಗಲ್‍ನ ಸರಕಾರಿ ಪಾಲಿಟೆಕ್ನಿಕ್ ಕಾಲೇಜು ಕೇಂದ್ರಗಳಲ್ಲಿ ಡಿಸೆಂಬರ್ 29ರಂದು ಬೆಳಿಗ್ಗೆ 10ರಿಂದ ಸಾಯಂಕಾಲ 4 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ಕೇಂದ್ರದಲ್ಲಿ ಯಾವುದೇ ರೀತಿಯ ಅಕ್ರಮ, ಅವ್ಯವಹಾರ ನಡೆಯದಂತೆ ತಡೆಗಟ್ಟಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163ರ ಅನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಅಂತರದ ಪ್ರದೇಶದಲ್ಲಿ ವಿವಿಧ ಷರತ್ತಿಗೆ ಒಳಪಟ್ಟು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಿಷೇಧಿತ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.
ಪರೀಕ್ಷೆಯಲ್ಲಿ ಪ್ರವೇಶ ಪತ್ರ ಹೊಂದಿದ ಅಭ್ಯರ್ಥಿಗಳು ಹಾಗೂ ನಿಯೋಜಿತ ಶಿಕ್ಷಕರನ್ನು, ಜಾಗೃತ ದಳದವರನ್ನು ಹೊರತುಪಡಿಸಿ ಇನ್ನೂಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ.
200 ಮೀಟರ್ ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವದಿಲ್ಲ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *