ಬೆಂಗಳೂರು: ಜಿದ್ದಾಜಿದ್ದಿ ಕಣವಾಗಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನದ ಆಯ್ಕೆ ಚುನಾವಣೆಯಲ್ಲಿ ಪುನರಾಯ್ಕೆಯಾದ ಹಾಲಿ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ಬಿ.ಪಿ.ಕೃಷ್ಣೇಗೌಡ ಅವರನ್ನು 65 ಮತಗಳ ಅಂತರದಿಂದ ಸೋಲಿಸಿದ್ದಾರೆ.
ಇಂದು ಬೆಂಗಳೂರಿನ ಕಬ್ಬನ್ಪಾರ್ಕ್ ಆವರಣದ ನೌಕರರ ಸಂಘದಲ್ಲಿ ಅಧ್ಯಕ್ಷ ಮತ್ತು ಖಜಾಂಜಿ ಸ್ಥಾನಕ್ಕೆ ಚುನಾವಣೆ ನಡೆಯಿತು.ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಸಿ.ಎಸ್.ಷಡಾಕ್ಷರಿಗೆ 507 ಮತಗಳು ಬಂದರೆ, ಬಿ.ಪಿ.ಕೃಷ್ಣೇಗೌಡಗೆ 442 ಮತಗಳು ಲಭಿಸಿದ್ದವು.
ಖಚಾಂಜಿ ಸ್ಥಾನಕ್ಕೆ ಸ್ಪರ್ಧಿಸಿದ್ದ ಅಭ್ಯರ್ಥಿ ನಾಗರಾಜ ಆರ್.ಜುಮ್ಮನ್ನವರ(ಷಡಾಕ್ಷರಿ ಬಣ), ವಿ.ವಿ.ಶಿವರುದ್ರಯ್ಯ (ಬಿ.ಪಿ.ಕೃಷ್ಣೇಗೌಡ ಬಣ) ವಿರುದ್ಧ ಕೇವಲ 18 ಮತಗಳ ಅಂತರದಿಂದ ಸೋಲು ಅನುಭವಿಸಿದರು. ವಿ.ವಿ.ಶಿವರುದ್ರಯ್ಯ 485 ಮತ ಪಡೆದರೆ, ನಾಗರಾಜ ಆರ್.ಜುಮ್ಮನ್ನವರಗೆ 467 ಮತಗಳು ಬಂದಿವೆ. ಬೆಂಗಳೂರು ನಗರ ಜಿಲ್ಲೆಯ 102 ರಾಜ್ಯ ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ಜಿಲ್ಲಾ ಖಜಾಂಚಿ, ಜಿಲ್ಲಾ ರಾಜ್ಯ ಪರಿಷತ್ ಸದಸ್ಯರು, ಜಿಲ್ಲಾ ಕಾರ್ಯದರ್ಶಿ, ತಾಲೂಕು ಶಾಖೆಯ ಅಧ್ಯಕ್ಷರು, ಖಜಾಂಚಿ, ರಾಜ್ಯ ಪರಿಷತ್ ಸದಸ್ಯರು, ಕಾರ್ಯದರ್ಶಿ ಮತ್ತು ಯೋಜನಾ ಶಾಖೆಗಳ ಅಧ್ಯಕ್ಷರು ಸೇರಿ ಒಟ್ಟು 949 ಮತದಾರರು ಮತ ಚಲಾಯಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

