Breaking News

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಂತ್ಯಕ್ರಿಯೆ: ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಭಾಗಿ

ನವದೆಹಲಿ : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆ ನೆರವೇರಲಿದ್ದು, ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಗಿಯಾಗಲಿದ್ದಾರೆ.
ಈ ಹಿನ್ನೆಲೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಿದ್ದಾರೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ಡಿ.26 ರಂದು ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *