ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ನಾಳೆ ಆಕಾಶವಾಣಿಯಲ್ಲಿ ಪ್ರತಿ ತಿಂಗಳು ಪ್ರಸಾರವಾಗುವ ತಮ್ಮ ಜನಪ್ರಿಯ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ದೇಶ ಮತ್ತು ವಿದೇಶಗಳಲ್ಲಿರುವ ಭಾರತೀಯರನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಬೆಳಗ್ಗೆ 11 ಗಂಟೆಗೆ ಈ ಕಾರ್ಯಕ್ರಮ ಪ್ರಸಾರವಾಗಲಿದ್ದು, ಇದು ಮನ್ ಕಿ ಬಾತ್‌ನ 117ನೇ ಅವತರಣಿಕೆಯಾಗಿದೆ. ಆಕಾಶವಾಣಿ ಮತ್ತು ದೂರದರ್ಶನದ ಎಲ್ಲ ವಾಹಿನಿಗಳಲ್ಲಿ, ಆಕಾಶವಾಣಿ ಸುದ್ದಿ ಜಾಲತಾಣ, ಮೊಬೈಲ್ ಆಪ್ ಹಾಗೂ ಯೂಟ್ಯೂಬ್ ಚಾನಲ್‌ಗಳಲ್ಲೂ ಈ ಕಾರ್ಯಕ್ರಮ ಮೂಡಿಬರಲಿದೆ.
ಪ್ರಧಾನಮಂತ್ರಿ ಕಾರ್ಯಾಲಯ ಹಾಗೂ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವಾಲಯದ ಜಾಲತಾಣಗಳಲ್ಲೂ ಈ ಕಾರ್ಯಕ್ರಮ ಬಿತ್ತರಗೊಳ್ಳಲಿದೆ. ಹಿಂದಿ ಭಾಷೆಯ ಪ್ರಸಾರದ ನಂತರ ಪ್ರಾದೇಶಿಕ ಭಾಷೆಗಳಲ್ಲೂ ಈ ಕಾರ್ಯಕ್ರಮ ಮೂಡಿಬರಲಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

