ಧಾರವಾಡ: ಅವಳಿ ನಗರದಲ್ಲಿ ಪೊಲೀಸ್ ಬಂದೂಕು ಮತ್ತೆ ಸದ್ದು ಮಾಡಿದೆ. ನಟೋರಿಯಸ್ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದಾರೆ.
ಹೌದು, ಮನೆ ಕಳ್ಳತನ ಪ್ರಕರಣದ ಆರೋಪಿ ಕ್ರಿಮಿನಲ್, ನಟೋರಿಯಸ್ ಪಾಲಾ ವೆಂಕಟೇಶ್ವರರಾವ್ ಎಂಬಾತನ ಎರಡು ಕಾಲಿಗೆ ಗುಂಡು ಬಿದಿದ್ದು, ಮೂಲತಃ ಆಂದ್ರಪ್ರದೇಶದ ಪಾಲಾ ವೆಂಕಟೇಶ್ವರರಾವ್, ಧಾರವಾಡದ ನವಲೂರಿನ ಮನೆಯೊಂದಕ್ಕೆ ಕನ್ನ ಹಾಕಿದ್ದ ಭೂಪ, ನಟೋರಿಯಸ್ ಕ್ರಿಮಿನಲ್‌ನನ್ನ ಬಂಧಿಸಿ ಹೆಚ್ಚಿನ ವಿಚಾರಣೆ ಕರೆದುಕೊಂಡು ಹೋದಾಗ ಪೊಲೀಸರ ಮೇಲೆ ದಾಳಿ ಮಾಡಿದ್ದಾನೆ.
ಆರೋಪಿ ದಾಳಿ ಮಾಡಿದ ಹಿನ್ನೆಲೆಯಲ್ಲಿ ಪಿಎಸ್ ಸೇರಿ ಇಬ್ಬರು ಸಿಬ್ಬಂದಿಗೆ ಗಾಯಗಳಾಗಿದ್ದು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಸುಮಾರು ಐದು ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದ ನಟೋರಿಯಸ್ ಪಾಲಾ ವೆಂಕಟೇಶ್ವರರಾವ್ ಮೇಲೆ 80 ಕ್ಕೂ ಹೆಚ್ಚು ಕಳ್ಳತನ ಪ್ರಕರಣಗಳಿವೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

