ಹುಬ್ಬಳ್ಳಿ: ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಶನಿವಾರ ರಾತ್ರಿ ಶಂಕರ್ (30) ವರ್ಷದ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಉಣಕಲ್‌ನಲ್ಲಿ ರವಿವಾರ ಮಧ್ಯರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ 9 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ 4 ಜನ ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಕಳೆದೆರಡು ದಿನದಲ್ಲಿ ಮೃತಪಟ್ಟಿದ್ದರು. ಶನಿವಾರ ತಡರಾತ್ರಿ ಶಂಕರ ಚವ್ಹಾಣ್ ಎಂಬ ಅಯ್ಯಪ್ಪ ಮಾಲಾಧಾರಿಯು ಕೂಡಾ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಇನ್ನುಳಿದ 4 ಜನರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಇನ್ನು ಕಿಮ್ಸ್ ಆಸ್ಪತ್ರೆಯ ಶವಾಗಾರದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

