Breaking News

ಸಿಲಿಂಡ‌ರ್ ಸ್ಪೋಟದಿಂದ ಗಾಯಗೊಂಡಿದ್ದ ಮತ್ತೊಬ್ಬ ಮಾಲಾಧಾರಿ ಸಾವು: ಮೃತರ ಸಂಖ್ಯೆ 6ಕ್ಕೆ ಏರಿಕೆ

ಹುಬ್ಬಳ್ಳಿ: ಸಿಲಿಂಡ‌ರ್ ಸ್ಪೋಟದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಂದು 22 ವರ್ಷದ ಮಂಜುನಾಥ ಎಂಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಉಣಕಲ್‌ನಲ್ಲಿ ಕಳೆದ ರವಿವಾರ ನಡುರಾತ್ರಿ ಸಿಲಿಂಡರ್‌ ಸ್ಪೋಟಗೊಂಡ ಪರಿಣಾಮ 9 ಜನರು ಗಂಭೀರವಾಗಿ ಗಾಯಗೊಂಡಿದ್ದರು. ಈ ಪೈಕಿ ಈಗಾಗಲೇ 5 ಜನ ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್‌ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.

ಇಂದು ಬೆಳ್ಳಿಗ್ಗೆ 10.15ಕ್ಕೆ ಮಂಜುನಾಥ ವಾಗಮೋಡೆ ಎಂಬ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಬೆಂಕಿ ದುರಂತದಲ್ಲಿ ಮೃತ ಮಂಜುನಾಥ ದೇಹ 70% ಸುಟ್ಟ ಗಾಯಗಳಾಗಿತ್ತು. ಸದ್ಯ ಇನ್ನುಳಿದ 3 ಜನರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

Share News

About Shaikh BigTv

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *