Breaking News
Featured Video Play Icon

ಹುಬ್ಬಳ್ಳಿಯ ರೌಡಿಗಳಿಗೆ ಕಮಿಷನರ್ ಎನ್. ಶಶಿಕುಮಾರ್ ಖಡಕ್‌ ವಾರ್ನಿಂಗ್‌…!

ಹುಬ್ಬಳ್ಳಿ : ಅವಳಿ ನಗರದಲ್ಲಿ ಹಳಿ ತಪ್ಪಿದ ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಪುಡಿ ರೌಡಿಗಳ ಹಾವಳಿ ಹೆಚ್ಚಾಗಿದ್ದು, ಸಾಲು ಸಾಲು ಅಪರಾಧ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿವೆ. ಇನ್ನು ಈ ಸಂಬಂಧ ಹುಬ್ಬಳ್ಳಿ – ಧಾರವಾಡ ಪೊಲೀಸ್‌ ಕಮಿಷನರ್‌ ಎನ್‌ ಶಶಿಕುಮಾರ್‌ ಪುಡಿ ರೌಡಿಗಳಿಗೆ ಖಡಕ್‌ ವಾರ್ನಿಂಗ್‌ ನೀಡಿ, ತರಾಟೆಗೆ ತೆಗೆದುಕೊಂಡರು.

ನಗರದ ಹಳೇ ಸಿಎಆರ್‌ ಮೈದಾನದಲ್ಲಿ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ರೌಡಿಗಳಿಗೆ ಪರೇಡ್‌ ನಡೆಸಿದರು.ಹುಬ್ಬಳ್ಳಿ- ಧಾರವಾಡ ಕಮಿಷನರೇಟ್ ವ್ಯಾಪ್ತಿಯ 15 ಠಾಣೆಗಳಿಂದ 1000 ರೌಡಿಗಳು ಇದ್ದರು. ಈ ವೇಳೆ ಕಮಿಷನರ್ ಎನ್ ಶಶಿಕುಮಾರ್, ನಗರದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಪುಡಿ ರೌಡಿಗಳು ಬಾಲ ಬಿಚ್ಚಿದಂತೆ ರೌಡಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಇನ್ನು, ರೌಡಿ ಶಿಟರ್ ಗಳ ಪರೇಡ್ ವೇಳೆ ಕೊಲೆ ಆರೋಪಿಗೆ ಕಮಿಷನರ್ ಕ್ಲಾಸ್ ತೆಗೆದುಕೊಂಡರು. ಅಂಬೇಡ್ಕರ್ ಭಾವ ಚಿತ್ರ ಇರುವ ಪೆನ್ ಜೇಬಿಗಿಟ್ಟು ಬಂದಿದ್ದ ರೌಡಿ ಶಿಟರ್ ಗೆ ಅಂಬೇಡ್ಕರ್ ಬಗ್ಗೆ ಪಾಠ ಮಾಡಿದ ಕಮಿಷನರ್, ಕೊಲೆ ಆರೋಪಿಗಳು ಎದೆಗೆ ಅಂಬೇಡ್ಕರ್ ಭಾವಚಿತ್ರ ಇಟ್ಟುಕೊಂಡು ಓಡಾಡುವ ಪರಿಸ್ಥಿತಿ ಇನ್ನೂ ನಮ್ಮ ದೇಶಕ್ಕೆ ಬಂದಿಲ್ಲ. ಅಂಬೇಡ್ಕರ್ ಭಾವ ಚಿತ್ರ ಹಾಕಿಕೊಂಡು ಓಡಾಡೋದಲ್ಲಾ ಅವರ ತತ್ವ ಸಿದ್ದಾಂತಗಳ ಬಗ್ಗೆ ತಿಳಿದುಕೊಂಡು ಬಾ ಎಂದ ಕಮಿಷನರ್ ಕ್ಲಾಸ್ ತೆಗೆದುಕೊಂಡರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *