Breaking News

ಕಲಬುರಗಿ: ಕೆಎಎಸ್ ಪರೀಕ್ಷೆಗೆ ಶೇ.50 ಕ್ಕಿಂತ ಹೆಚ್ಚು ಅಭ್ಯರ್ಥಿಗಳು ಗೈರು

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗವು 384 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಭಾನುವಾರ ನಡೆಸಿದ ಪೂರ್ವಭಾವಿ ಮರು ಪರೀಕ್ಷೆಗೆ ಜಿಲ್ಲೆಯಲ್ಲಿ ಅರ್ಧಕ್ಕೂ ಹೆಚ್ಚು ಅಭ್ಯರ್ಥಿಗಳು ಗೈರಾಗಿದ್ದರು.
ಮರು ಪರೀಕ್ಷೆಯು ನಗರದ 38 ಕೇಂದ್ರಗಳಲ್ಲಿ ಸುಸೂತ್ರವಾಗಿ ನಡೆಯಿತು.
ಮೊದಲ ಪ್ರಶ್ನೆ ಪತ್ರಿಕೆ-1ಕ್ಕೆ 12,202 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 5,684 ಅಭ್ಯರ್ಥಿಗಳು ಹಾಜರಾಗಿದ್ದರು. 6518 ಅಭ್ಯರ್ಥಿಗಳು ಗೈರಾದರು. ಮಧ್ಯಾಹ್ನ ನಡೆದ ಎರಡನೇ ಪತ್ರಿಕೆ ಪರೀಕ್ಷೆಯಲ್ಲಿ 5,665 ಅಭ್ಯರ್ಥಿಗಳು ಹಾಜರಾಗಿ, 6,537 ಅಭ್ಯರ್ಥಿಗಳು ಪರೀಕ್ಷೆಯಿಂದ ದೂರ ಉಳಿದರು.
ಪರೀಕ್ಷೆ ಕೇಂದ್ರಗಳಲ್ಲಿ ಅಭ್ಯರ್ಥಿಗಳನ್ನು ತಪಾಸಣೆ ಮಾಡಿ ಒಳಗೆ ಕಳುಹಿಸಿಕೊಡುತ್ತಿದ್ದದ್ದು ಕಂಡು ಬಂದಿತು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *