Breaking News

ಬೆಂಗಳೂರಿನಲ್ಲಿ ಕೆ ಎಸ್ ಡಿ ಎಲ್ ಅಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ ಕೆಎಸ್ ಡಿ ಎಲ್(KSDL) ಅಧಿಕಾರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಡೆತ್ ನೋಟ್ ಬರೆದಿಟ್ಟು ಕೆಎಸ್ ಡಿ ಎಲ್ ಅಧಿಕಾರಿ ಅಮೃತ್ (40) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
KSDL’ ನ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿ ಅಮೃತ್ ಕೈಯಲ್ಲೇ ಡೆತ್ ನೋಟ್ ಹಿಡಿದುಕೊಂಡು ನೇಣಿಗೆ ಶರಣಾಗಿದ್ದಾರೆ.
ಡಿ.28 ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. 2019 ರಲ್ಲಿ 2 ನೇ ಮದುವೆಯಾಗಿದ್ದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಮಹಾಲಕ್ಷ್ಮೀ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *