Breaking News

ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಸಾವು: ಮೃತರ ಸಂಖ್ಯೆ 7ಕ್ಕೆ ಏರಿಕೆ

ಹುಬ್ಬಳ್ಳಿ: ಉಣಕಲ್‌ನ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಗ್ಯಾಸ್ ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಮತ್ತೋರ್ವ ಮಾಲಾಧಾರಿ ಸಾವಿಗೀಡಾಗಿದ್ದು, ಸತ್ತವರ ಸಂಖ್ಯೆ ಏಳಕ್ಕೇರಿದೆ.

ತೇಜಸ್ ಸತಾರೆ ಎಂಬ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವಿಗೀಡಾಗಿದ್ದು, ತೇಜಸ್ ಹೊಟೇಲ್‌ನಲ್ಲಿ ಕುಕ್ ಆಗಿ ಕೆಲಸ ಮಾಡುತ್ತಿದ್ದ. ಘಟನೆಯಲ್ಲಿ ಇನ್ನೋರ್ವನ ಸ್ಥಿತಿಯೂ ಗಂಭೀರವಾಗಿದೆ. ಘಟನೆಯ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮೃತ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಕುಟುಂಬಕ್ಕೆ ಸರಕಾರ ಐದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.

Share News

About Shaikh BigTv

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *