Breaking News

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ: ಸಚಿವ ಪ್ರಿಯಾಂಕ್ ಖರ್ಗೆ ಮನೆ ಮುಂದೆ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಬೀದರ್‌ ಜಿಲ್ಲೆಯ ಭಾಲ್ಕಿಯ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಪಕ್ಷದ ನಾಯಕರು, ಕಾರ್ಯಕರ್ತರು ಇಂದು (ಮಂಗಳವಾರ) ಪ್ರತಿಭಟನೆ ನಡೆಸಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಮನೆ ಮುಂದೆ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಪೋಸ್ಟರ್ ಅಂಟಿಸಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಾಯಕ ಸಿ.ಟಿ.ರವಿ ಸೇರಿ ಇತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಸಿ.ಟಿ. ರವಿ, ‘ಪ್ರಾಮಾಣಿಕ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ‘ಸೂಸೈಡ್ ಭಾಗ್ಯ’ ಹಾಗೂ ರಾಜಕೀಯ ಎದುರಾಳಿಗಳಿಗೆ ‘ಸುಪಾರಿ ಭಾಗ್ಯದ’ ‘ಗ್ಯಾರೆಂಟಿ’ ನೀಡಿದ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಮತ್ತು ಗುತ್ತಿಗೆದಾರ ಸಾವಿಗೆ ಕಾರಣೀಭೂತರಾದ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು ಎಂದು ಹೇಳಿದ್ದಾರೆ.

Share News

About BigTv News

Check Also

ಇ-ಖಾತೆಗಾಗಿ ₹50 ಸಾವಿರ ಲಂಚಕ್ಕೆ ಬೇಡಿಕೆ; ಮೊದಲ ಕಂತು ಪಡೆಯುವಾಗ ನಗರಸಭೆ ಸಿಬ್ಬಂದಿ ಲೋಕಾಯುಕ್ತ ಬಲೆಗೆ

ಶಿಡ್ಲಘಟ್ಟ: ಇ-ಖಾತೆ ಮಾಡಿಕೊಡಲು ₹50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟು, ಮೊದಲ ಕಂತಿನ ₹25,500 ಸ್ವೀಕರಿಸುತ್ತಿದ್ದ ನಗರಸಭೆಯ ಎಸ್‌ಡಿಎ ನಾಗರಾಜ್ …

Leave a Reply

Your email address will not be published. Required fields are marked *