Breaking News

ಶಿರಾದಲ್ಲೂ ಸೋಲಾರ್ ವಿದ್ಯುತ್ ಉತ್ಪಾದನಾ ಘಟಕ: ಸಚಿವ ಕೆ.ಜೆ.ಜಾರ್ಜ್‌

ಶಿರಾ: ತಾಲ್ಲೂಕಿನ ಗೌಡಗೆರೆ ‌ಹೋಬಳಿಯ ಚೆಂಗಾವರ, ಹುಲಿಕುಂಟೆ ಹೋಬಳಿಯ ಚಿಕ್ಕಬಾಣಗೆರೆ ಗ್ರಾಮದ ಬಳಿ ಸೋಲಾರ್ ಘಟಕ ನಿರ್ಮಿಸಿದ್ದು, ಎರಡೂ ಕಡೆಯಿಂದ ಒಟ್ಟು 8.9 ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು.
ಸೋಲಾರ್ ಘಟಕ ನಿರ್ಮಿಸಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿ, ‘ಉತ್ಪಾದಿಸಿದ ವಿದ್ಯುತ್‌ಅನ್ನು ಸ್ಥಳೀಯವಾಗಿ ಕೃಷಿ ಪಂಪ್‌ಸೆಟ್‌ಗಳಿಗೆ ಸರಬರಾಜು ಮಾಡಲಾಗುತ್ತಿದೆ.
ಪಿಎಂ- ಕುಸುಮ್ ಯೋಜನೆಯಲ್ಲಿ ಸೋಲಾರ್ ಘಟಕ ನಿರ್ಮಿಸಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತಿದೆ’ ಎಂದರು.
ಚಂಗಾವರ ಬಳಿ 2.4 ಮೆಗಾವಾಟ್ ವಿದ್ಯುತ್ ಉತ್ಪಾದಿಸಿ 944 ಕೃಷಿ ಪಂಪ್‌ಸೆಟ್‌ಗಳಿಗೆ ಸರಬರಾಜು ಮಾಡಲಾಗುತ್ತಿದೆ. ಚಿಕ್ಕಬಾಣಗೆರೆ ಗ್ರಾಮದ ಬಳಿ 6.5 ಮೆಗಾ ವಾಟ್ ಉತ್ಪಾದಿಸಿ 1,355 ಕೃಷಿ ಪಂಪ್‍ಸೆಟ್‍ಗಳಿಗೆ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಉತ್ಪಾದನಾ ಸಾಮರ್ಥ್ಯ 16.5 ಮೆಗಾವಾಟ್‌ಗೆ ಹೆಚ್ಚಾಗಲಿದೆ ಎಂದು ಹೇಳಿದರು.
ನವದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ‘ಸ್ಥಳೀಯವಾಗಿ ವಿದ್ಯುತ್ ನೀಡುವುದರಿಂದ ವೋಲ್ಟೇಜ್‌ನಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ. ಇದರಿಂದ ರೈತರ ಪಂಪ್‌ಸೆಟ್‌ಗಳು ಸುರಕ್ಷಿತವಾಗಿರುತ್ತವೆ. ವಿದ್ಯುತ್ ಕಡಿತದ ಸಮಸ್ಯೆ ತಪ್ಪಲಿದೆ. ರಾತ್ರಿ ಬದಲು ಹಗಲಿನಲ್ಲಿ ವಿದ್ಯುತ್ ನೀಡುವುದರಿಂದ ರೈತರಿಗೆ ಹೆಚ್ಚು ಅನುಕೂಲವಾಗಲಿದೆ’ ಎಂದು ತಿಳಿಸಿದರು.
ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಪಂಕಜ್ ಕುಮಾರ್ ಪಾಂಡೆ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ, ಬೆಸ್ಕಾಂ ಮುಖ್ಯ ಎಂಜಿನಿಯರ್ (ಯೋಜನೆ) ರಮೇಶ್ ಗುಡಿ, ಸೂಪರಿಂಟೆಂಡಿಂಗ್ ಎಂಜಿನಿಯರುಗಳಾದ ನರಸಿಂಹಮೂರ್ತಿ, ಡಿ.ಶಿವಕುಮಾರ್, ಕಾರ್ಯನಿರ್ವಾಹಕ ಎಂಜಿನಿಯರ್ ಜಿ.ಜಗದೀಶ್, ಪ್ರಶಾಂತ್ ಕೂಡ್ಲಿಗಿ, ಎಂಜಿನಿಯರ್ ಇ.ಶಾಂತರಾಜು, ನಗರಸಭೆ ಅಧ್ಯಕ್ಷ ಜೀಷಾನ್ ಮಹಮೂದ್, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಶಂಕರ್, ಸದಸ್ಯರಾದ ಅಜೇಯ್ ಕುಮಾರ್, ಜಾಫರ್, ಮುಖಂಡರಾದ ಸಿದ್ದಪ್ಪ, ಕರಿಯಣ್ಣ, ವಕೀಲ ಜಗದೀಶ್ ಇತರರು ಉಪಸ್ಥಿತರಿದ್ದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *