Breaking News

ನಾಡಿನ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯಾದ್ಯಂತ 2024 ಕ್ಕೆ ಗುಡ್ ಬೈ ಹೇಳಿದ್ದು, 2025 ರ ಹೊಸ ವರ್ಷವನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ. ಈ ನಡುವೆ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಪ್ರೀತಿಯ ನಾಡಬಾಂಧವರಿಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು.
ಹೊಸ ವರ್ಷವನ್ನು ಹೊಸ ಚಿಂತನೆ, ಹೊಸ ಭರವಸೆ ಹಾಗೂ ಹೊಸ ಉತ್ಸಾಹದೊಂದಿಗೆ ಬರಮಾಡಿಕೊಳ್ಳೋಣ. ಜಾತಿ, ಧರ್ಮಗಳ‌ ದ್ವೇಷ ತೊರೆದು ಎಲ್ಲರೂ ಒಂದಾಗಿ ಪ್ರೀತಿ – ಸಹಬಾಳ್ವೆಯ ಹಾದಿಯಲ್ಲಿ ಹೆಜ್ಜೆಹಾಕೋಣ. 2025ರ ನವ ವಸಂತ ತಮ್ಮೆಲ್ಲರ ಬಾಳಲ್ಲಿ ಸುಖ, ಶಾಂತಿ, ಸಮೃದ್ಧಿಯನ್ನು ತರಲಿ ಎಂದು ಹಾರೈಸಿದ್ದಾರೆ.

Share News

About BigTv News

Check Also

ತೋಟದಲ್ಲಿ ಗಾಂಜಾ ಗಿಡ ಬೆಳೆದು ಸಿಕ್ಕಿಬಿದ್ದ ಪೊಲೀಸಪ್ಪನ ಪುತ್ರ: ಅತ್ತ ತಂದೆಯಿಂದ ಜಾಗೃತಿ, ಇತ್ತ ಮಗನಿಂದ ಕುಕೃತ್ಯ!

ತುಮಕೂರು: ಡ್ರಗ್ಸ್‌ ಮುಕ್ತ ಸಮಾಜ ನಿರ್ಮಾಣಕ್ಕೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿರುವ ನಡುವೆಯೇ, ಪೊಲೀಸ್ ಸಿಬ್ಬಂದಿಯ ಪುತ್ರನೇ ಗಾಂಜಾ ಗಿಡ …

Leave a Reply

Your email address will not be published. Required fields are marked *