Breaking News

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಶ್ರದ್ಧಾಂಜಲಿ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರಿಗೆ ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಗಾಹ್ ಎಂಬ ಹಳ್ಳಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 1932ರಲ್ಲಿ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಗಾಹ್ ಎಂಬ ಹಳ್ಳಿಯಲ್ಲಿ ಜನಿಸಿದ್ದರು.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಡಿ. 26ರಂದು ದೆಹಲಿಯಲ್ಲಿ ನಿಧನರಾದರು. ಈ ಬೆನ್ನಲ್ಲೇ ಅಲ್ಲಿನ ಗ್ರಾಮಸ್ಥರು ಶ್ರದ್ಧಾಂಜಲಿ ಸಭೆ ನಡೆಸಿದರು. ಈ ವೇಳೆ ಮನಮೋಹನ್ ಸಿಂಗ್ ಅವರ ನಷ್ಟಕ್ಕೆ ಶೋಕ ವ್ಯಕ್ತಪಡಿಸಿದರು.
ಡಿ. 27ರಂದು ದೆಹಲಿಯ ನಿಗಮ್ ಬೋಧ್ ನಲಿ ಸಿಖ್ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನೆರವೇರಿದ್ದು, ಪಂಚಭೂತಗಳಲ್ಲಿ ಮನಮೋಹನ್ ಸಿಂಗ್ ಲೀನರಾಗಿದ್ದಾರೆ. ಅಗಲಿದ ಮನಮೋಹನ್‌ ಸಿಂಗ್‌ಗೆ ದೇಶ ವಿದೇಶದ ಗಣ್ಯರು ಸಂತಾಪವನ್ನು ಸೂಚಿಸಿದರು. ಅದೇ ರೀತಿ ಭಾರತವು 7 ದಿನಗಳ ಶೋಕಾಚರಣೆಯನ್ನು ಆಚರಿಸುತ್ತಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *