Breaking News

ಮಾರ್ಚ್ ತಿಂಗಳಲ್ಲಿ ಬಜೆಟ್ ಮಂಡನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಈ ಬಾರಿ ಮಾರ್ಚ್ ತಿಂಗಳಿನಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ. ಆದರೆ ಬಜೆಟ್ ಮಂಡನೆ ದಿನಾಂಕ ಇನ್ನು ನಿಗದಿಯಾಗಿಲ್ಲ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬರುವ ಮಾರ್ಚ್ ತಿಂಗಳಿನಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ ಆದರೆ ಬಜೆಟ್ ಮಂಡನೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ ಖರ್ಗೆಯವರು ರಾಜಿನಾಮೆ ನೀಡಬೇಕೆಂಬ ಪ್ರತಿಪಕ್ಷಗಳ ಒತ್ತಾಯ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ , ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್ ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ , ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ.
ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ. ಆದರೆ ಇಂತಹದೇ ಪ್ರಕರಣದಲ್ಲಿ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪ ಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು. ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ತನಿಖೆಯನ್ನು ಸಿಐಡಿ ಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ತಿಳಿಸಿದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *