Breaking News

ವಿಜಯಪುರ: ತೊಗರಿ ದರ ಹೆಚ್ಚಿಸುವಂತೆ ಆಗ್ರಹಿಸಿ ರೈತ ಸಂಘದಿಂದ ಪ್ರತಿಭಟನೆ

ಬಸವನಬಾಗೇವಾಡಿ: ತೊಗರಿ ದರ ಹೆಚ್ಚಿಸುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ರೈತರು ಇಂದು ತಾಲ್ಲೂಕಿನ ಹೂವಿನಹಿಪ್ಪರಗಿಯ ನಾಡ ಕಚೇರಿ ಆವರಣದಲ್ಲಿ ತೊಗರಿ ಹಾಕಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ, ಉಪತಹಶೀಲ್ದಾರ್ ಎಸ್.ಕೆ.ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.
ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ, ‘ಕಳೆದ ಐದಾರು ತಿಂಗಳ ಹಿಂದೆ ಕ್ವಿಂಟಲ್ ತೊಗರಿಗೆ ₹12 ಸಾವಿರಯಿದ್ದ ದರವನ್ನು ಕೇಂದ್ರ ಸರ್ಕಾರ ದಿಢೀರನೆ ₹7,550ಕ್ಕೆ ಇಳಿಸಿ, ರೈತರನ್ನು ಬೀದಿಗೆ ತಳ್ಳುವ ಕೆಲಸ ಮಾಡುತ್ತಿದೆ’ ಎಂದು ಆರೋಪಿಸಿದರು.
ಕೇಂದ್ರ ಸರ್ಕಾರ ಬೆಳೆಗೆ ಬೆಲೆ ನಿಗದಿಪಡಿಸುವ ಮೊದಲು ರೈತರೊಂದಿಗೆ ಚರ್ಚಿಸಬೇಕು. ಭೂಮಿ ಹದಗೊಳಿಸಿ, ಬೀಜ ಬಿತ್ತನೆ ಮಾಡುವುದರಿಂದ ಹಿಡಿದು, ಬೆಳೆಯನ್ನು ಮಾರುಕಟ್ಟೆಗೆ ತಲುಪಿಸುವವರೆಗೆ ತಗಲುವ ವೆಚ್ಚ ಅಪಾರ. ಆ ಎಲ್ಲ ವೆಚ್ಚವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಯೋಗ್ಯ ಮಾರುಕಟ್ಟೆ ದರ ನಿಗದಿಪಡಿಸಬೇಕು’ ಎಂದು ಆಗ್ರಹಿಸಿದರು.
ರೈತರು ರಾಶಿ ಮಾಡಲು ಪ್ರಾರಂಭಿಸದಾಗ ಉದ್ದೇಶಪೂರ್ವಕವಾಗಿ ವಿದೇಶದಿಂದ ತೊಗರಿ ಆಮದು ಮಾಡಿಕೊಂಡು ರೈತರಿಗೆ ಅನ್ಯಾಯ ಮಾಡಲಾಗುತ್ತಿದೆ. ಕೂಡಲೆ ತೊಗರಿ ದರವನ್ನು ಪ್ರತಿ ಕ್ವಿಂಟಲ್ ಗೆ ₹12 ಸಾವಿರವರೆಗೆ ಹೆಚ್ಚಿಸಬೇಕು’ ಎಂದು ಒತ್ತಾಯಿಸಿದರು.
ವಿಠ್ಠಲ ಬಿರಾದಾರ, ಹೊನಕೇರೆಪ್ಪ ತೆಲಗಿ, ಚನ್ನಬಸಪ್ಪ ಸಿಂಧೂರ, ಹಣಮಂತರಾಯ ಗುಣಕಿ, ಮಲ್ಲನಗೌಡ ನಾಡಗೌಡ, ಗುರುಸಂಗಪ್ಪ ಶಿವಯೋಗಿ, ಮಹೇಶ ಯಡಳ್ಳಿ, ಭಾಗಪ್ಪ ನಾಟಿಕಾರ, ದಾವೂಲಸಾಬ ನದಾಫ್, ಹಣಮಂತ ಮುರಾಳ, ಗಿರಿಮಲ್ಲಪ್ಪ ದೊಡಮನಿ, ಬಸವರಾಜ ಚೌಧರಿ, ಭೀಮನಗೌಡ ಪಾಟೀಲ, ಲಂಕೇಶ ತಳವಾರ, ಬಂಗೆಪ್ಪ ಸಾಸನೂರ, ನಿಂಗಣ್ಣ ನಾಡಗೌಡ, ಸಿದ್ದು ಮೇಟಿ, ರ್ಯಾಬಪ್ಪಗೌಡ ಪುಲೇಶಿ, ರಾಜೇಸಾಬ ವಾಲಿಕಾರ, ಬಂದಗಿಸಾ ಹಳ್ಳೂರ, ಸಿದ್ದಪ್ಪ ಹಳ್ಳೂರ, ಹಣಮಂತ ಸಾಸನೂರ, ಸಾಯಬಣ್ಣ ತಾಳಿಕೋಟಿ, ಗುರುಪಾದಪ್ಪ ಗುಂಡಣ್ಣನವರ, ಸಿದ್ದಪ್ಪ ಗುಂಡಣ್ಣನವರ, ಶಿವಪ್ಪ ಹುನಗುಂದ, ರುದ್ರಪ್ಪ ಕುಂಬಾರ, ಗುರಸಂಗಪ್ಪ ಶಿವಯೋಗಿ, ಲಕ್ಷ್ಮಣ ಚೌಧರಿ, ಶ್ರೀಶೈಲ ಮಾಳೂರ ಇದ್ದರು.

Share News

About bigtvnews22

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *