ವಿಜಯಪುರ: ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆ ಮಾಡುವಂತೆ ಆಗ್ರಹಿಸಿ ಕುರುಬರ ಸಂಘದ ವಿಜಯಪುರ ನಗರ ಘಟಕದಿಂದ ಮೇಘಾಲಯ ರಾಜ್ಯಪಾಲ ಸಿ. ಎಚ್.ವಿಜಯಶಂಕರ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.
ರಾಜ್ಯದಲ್ಲಿ ಶೇ 40ರಷ್ಟು ಕುರುಬ ಜನಾಂಗದವರು ಇದ್ದೇವೆ.ಈಗಾಗಲೇ ಹಲವು ವರ್ಷಗಳಿಂದ ಹೋರಾಟ ಮಾಡಿದ್ದೇವೆ. ಆದರೂ ನಮಗೆ ನ್ಯಾಯ ಸಿಕ್ಕಿಲ್ಲ. ಅದಕ್ಕಾಗಿ ನಮ್ಮ ಬೇಡಿಕೆಗಳನ್ನು ಪೂರೈಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮುಖಂಡರು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಕುರುಬ ಸಮಾಜವು ರಾಜಕೀಯವಾಗಿ, ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದ್ದು, ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಿದರೆ ಅನುಕೂಲವಾಗಲಿದೆ. ಈ ಸಂಬಂಧ ಕೇಂದ್ರ ಮತ್ತು ರಾಜ್ಯ ಸರ್ಕಾರದ ಗಮನಕ್ಕೆ ತರುವಂತೆ ಮನವಿ ಮಾಡಿದರು.
ಕುರುಬ ಸಮಾಜದ ಮುಖಂಡರಾದ ರಾಜು ಬಿರಾದಾರ, ರಾಜಣ್ಣ ಕಗ್ಗೋಡ, ಮಹಾಂತೇಶ ಬೇವೂರ, ಅರವಿಂದ ಬಿರಾದಾರ, ರಮೇಶ ಕಾಲೇಬಾಗ, ಸುರೇಶ ಡೋಂಬಾಳೆ ಮತ್ತಿತರರು ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





