Breaking News

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಪ್ರತ್ಯೇಕ ಎರಡು ಪಾಲಿಕೆ ರಚನೆಗೆ ಸಂಪುಟ ಅನುಮೋದನೆ

ಬೆಂಗಳೂರು : ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ, ಪ್ರತ್ಯೇಕವಾಗಿ ಎರಡು ಮಹಾನಗರ ಪಾಲಿಕೆ ರಚಿಸಲು ಸಚಿವ ಸಂಪುಟ ನಿರ್ಧಾರ ತೆಗೆದುಕೊಂಡಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದರು.
ನಿನ್ನೆ ಬೆಂಗಳೂರಿನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಒಂದು ನಿರ್ಣಯ ಕೈಗೊಳ್ಳಲಾಗಿದೆ.
ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ವಿಷಯ ತಿಳಿಯುತ್ತಿದ್ದಂತೆ ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ಸಮಿತಿ ವತಿಯಿಂದ ಸಿಹಿ ಹಂಚಿ, ಪಟಾಕಿ ಸಿಡಿಸಿ, ಸಂಭ್ರಮಾಚರಣೆ ನಡೆಸಲಾಗಿದೆ.
ಧಾರವಾಡದ ಜನಸಂಖ್ಯೆ 6.5 ಲಕ್ಷ ದಾಟಿರುವುದರಿಂದ, 2014ರಲ್ಲಿಯೇ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಒತ್ತಾಯ ಕೇಳಿ ಬಂದಿತ್ತು.ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಬಗ್ಗೆ ಘೋಷಣೆ ಮಾಡಲಾಗಿದ್ದು, ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಸಂಭ್ರಮಾಚರಣೆ ನಡೆಸಲಾಗಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *