Breaking News

ರಾಜ್ಯದಲ್ಲಿ ಶಕ್ತಿ ಯೋಜನೆ ಯಶಸ್ವಿ: ಆಂಧ್ರದಲ್ಲೂ ಯೋಜನೆ ಜಾರಿಗೆ ಸಿಎಂ ರೇವಂತ್ ರೆಡ್ಡಿ ಸರ್ಕಾರ ನಿರ್ಧಾರ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ), ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ), ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಎನ್‌ಡಬ್ಲ್ಯುಕೆಆರ್‌ಟಿಸಿ) ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು ನಾಲ್ಕು ಬಸ್ ನಿಗಮಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡುವ ಶಕ್ತಿ ಯೋಜನೆ ಯಶಸ್ವಿಯಾಗಿದ್ದು, ಆಂಧ್ರಪ್ರದೇಶದಲ್ಲೂ ಯೋಜನೆ ಜಾರಿಗೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಸರ್ಕಾರ ನಿರ್ಧಾರ ಮಾಡಿದೆ.
ಕರ್ನಾಟಕದ ಸರ್ಕಾರದ ‘ಶಕ್ತಿ’ ಯೋಜನೆ ಕುರಿತು ಅಧ್ಯಯನ ನಡೆಸಲು ಆಂಧ್ರ ಪ್ರದೇಶದ ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ ನೇತೃತ್ವದ ಸಚಿವರ ನಿಯೋಗ ಇಂದು ಕೆಎಸ್‌ಆರ್‌ಟಿಸಿ ಕೇಂದ್ರ ಕಚೇರಿಗೆ ಭೇಟಿ ನೀಡಿದ್ದು, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಆಂಧ್ರ ಪ್ರದೇಶದ ಸಾರಿಗೆ, ಯುವ ಸಬಲೀಕರಣ ಕ್ರೀಡಾ ಸಚಿವ ಮಂಡಿಪಲ್ಲಿ ರಾಮ ಪ್ರಸಾದ್ ರೆಡ್ಡಿ, ಗೃಹ ಮತ್ತು ವಿಪತ್ತು ನಿರ್ವಹಣಾ ಸಚಿವೆ ವಂಗಲಪುಡಿ ಅನಿತಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಗುಮ್ಮಟ್ಟಿ ಸಂಧ್ಯಾರಾಣಿ ನೇತೃತ್ವದ ತಂಡ ರಾಮಲಿಂಗಾ ರೆಡ್ಡಿಯವರನ್ನು ಭೇಟಿ ಮಾಡಿದರು.
.ಆಂಧ್ರ ಪ್ರದೇಶದ ಸಾರಿಗೆ ಸಚಿವ ರಾಮಪ್ರಸಾದ್ ರೆಡ್ಡಿ ನೇತೃತ್ವದ ಸಚಿವರ ನಿಯೋಗಕ್ಕೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಅನ್ಬುಕುಮಾರ್, ಬಿಎಂಟಿಸಿ ಎಂಡಿ ಆರ್ ರಾಮಚಂದ್ರನ್ ಮತ್ತು ಕೆಎಸ್‌ಆರ್‌ಟಿಸಿ ವಿಜಿಲೆನ್ಸ್ ನಿರ್ದೇಶಕಿ ನಂದಿನಿ ದೇವಿ ಅವರು ಯೋಜನೆ ಕುರಿತು ಮಾಹಿತಿ ನೀಡಿದರು.
ರಾಜ್ಯದ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ ಬಳಿಕ ಪ್ರತಿಕ್ರಿಯೆ ನೀಡಿದ ಆಂಧ್ರಪ್ರದೇಶ ಸಾರಿಗೆ ಸಚಿವರು, ಯೋಜನೆಯು ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದೆ. ಯೋಜನೆ ಮಹಿಳೆಯರು, ವಿದ್ಯಾರ್ಥಿ ಹಾಗೂ ಕಾರ್ಮಿಕರಿಗೆ ಸಾಕಷ್ಟು ಪ್ರಯೋಜನೆ ನೀಡುತ್ತದೆ. ಇದು ಬಡವರ ಪರ ಯೋಜನೆಯಾಗಿದ್ದು, ಆಂಧ್ರಪ್ರದೇಶದಲ್ಲೂ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ಹೇಳಿದರು.
ಆಂಧ್ರಪ್ರದೇಶ ವಿಧಾನಸಭಾ ಚುನಾವಣೆ ಪ್ರಚಾರದ ವೇಳೆ ರೇವಂತ್ ರೆಡ್ಡಿಯವರು 6 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. 6 ಗ್ಯಾರಂಟಿ ಯೋಜನೆಗಳಲ್ಲಿ ಉಚಿತ ಬಸ್ ಪ್ರಯಾಣ ಯೋಜನೆ ಕೂಡ ಒಂದಾಗಿತ್ತು. ಇದೀಗ ಯೋಜನೆ ಜಾರಿಗೆ ಸಿದ್ಧತೆ ಆರಂಭಿಸಿರುವ ರೇವಂತ್ ರೆಡ್ಡಿ ಸರ್ಕಾರ, ಕಾರ್ಯಸಾಧ್ಯತೆ, ಸಾಧಕ-ಬಾಧಕಗಳನ್ನು ಅಧ್ಯಯನ ಮಾಡಲು ರಾಜ್ಯಕ್ಕೆ ಭೇಟಿ ನೀಡಿದೆ.
ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಜನ‌ಮೆಚ್ಚುಗೆ ಗಳಿಸಿದೆ. ಕಳೆದ ಎರಡು ವರ್ಷದಿಂದ ಕಾಂಗ್ರೆಸ್ ಸರ್ಕಾರ ಮಹತ್ವಾಕಾಂಕ್ಷೆಯ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸುತ್ತಿದೆ. ಕಾಂಗ್ರೆಸ್ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿಗಳ ಪೈಕಿ ಶಕ್ತಿ ಯೋಜನೆ ಜನಪ್ರಿಯ ಗಳಿಸಿರುವ ಯೋಜನೆಯಾಗಿದೆ. ಈಗಾಗಲೇ ಶಕ್ತಿ ಯೋಜನೆಯಡಿ ಸುಮಾರು 300 ಕೋಟಿ ರೂಪಾಯಿಗೂ ಅಧಿಕ ಮಹಿಳೆಯರು ಉಚಿತವಾಗಿ ಪ್ರಯಾಣ ಬೆಳೆಸುತ್ತಿದ್ದಾರೆ. ಶಕ್ತಿ ಯೋಜನೆಗೆ ಉತ್ತಮ ಸ್ಪಂದನೆ ಸಿಕ್ಕಿದ್ದು, ಮಹಿಳೆಯರ ಮೆಚ್ಚುಗೆಗೆ ಪಾತ್ರವಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *