Breaking News

ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಬಗ್ಗೆ ಘೋಷಣೆ: ಹೋರಾಟ ಸಮಿತಿ ವತಿಯಿಂದ ಸಂಭ್ರಮಾಚರಣೆ

ಧಾರವಾಡ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯನ್ನು ವಿಭಜಿಸಿ ಪ್ರತ್ಯೇಕ ಧಾರವಾಡ ಮಹಾನಗರ ಪಾಲಿಕೆ ರಚಿಸಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ಘೋಷಣೆಯಾದ ಹಿನ್ನೆಲೆಯಲ್ಲಿ ಧಾರವಾಡ ಮಹಾನಗರ ಪಾಲಿಕೆ ಕಚೇರಿ ಎದುರು ಸಂಭ್ರಮಾಚರಣೆ ನಡೆಸಲಾಗಿದೆ.
ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ಹೋರಾಟ ಸಮಿತಿ ವತಿಯಿಂದ ಸಿಹಿ ಹಂಚಿ, ಪಟಾಕಿ ಸಿಡಿಸಿ, ಸಂಭ್ರಮಾಚರಣೆ ನಡೆಸಲಾಗಿದೆ.
2014ರಲ್ಲಿಯೇ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಒತ್ತಾಯ ಕೇಳಿ ಬಂದಿತ್ತು. ಧಾರವಾಡದ ಜನಸಂಖ್ಯೆ 6.5 ಲಕ್ಷ ದಾಟಿರುವುದರಿಂದ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆಗೆ ಆಗ್ರಹಿಸಲಾಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಧಾರವಾಡಕ್ಕೆ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಬಗ್ಗೆ ಘೋಷಣೆ ಮಾಡಲಾಗಿದ್ದು, ಸಂಭ್ರಮಾಚರಣೆ ನಡೆಸಲಾಗಿದೆ.

Share News

About Shaikh BigTv

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *