Breaking News

ಗಿರಿಜನ ಉಪಯೋಜನೆಯಡಿ ಎಸ್ಸಿ,ಎಸ್ಟಿ ಸಮುದಾಯ ಕ್ಕೆ ಜವಳಿ ಉದ್ದಿಮೆ ಸ್ಥಾಪನೆಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬೆಂಗಳೂರು : ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ವಿಶೇಷ ಘಟಕ / ಗಿರಿಜನ ಉಪಯೋಜನೆಯಡಿ ಸರ್ಕಾರದ ಸಹಾಯಧನ ಶೇ.75% ರಷ್ಟು ಸೌಲಭ್ಯ ಪಡೆದು ಜವಳಿ ಉದ್ದಿಮೆ ಸ್ಥಾಪಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ಜವಳಿ ಉದ್ದಿಮೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸಂಬಂಧಿಸಿದ ವೈಯಕ್ತಿಕ ಫಲಾನುಭವಿ/ ಪಾಲುದಾರಿಕೆ ಸಂಸ್ಥೆ / ಕಂಪನಿ/ ಜವಳಿ ಸಹಕಾರ ಸಂಘ / ಸಂಸ್ಥೆಯ ವತಿಯಿಂದ ಸಣ್ಣ ಮತ್ತು ಅತೀ ಸಣ್ಣ (ಎಸ್.ಎಂ.ಇ.) ಘಟಕಗಳನ್ನು ಪ್ರಾರಂಭಿಸಲು ಉತ್ತೇಜಿಸುವ ಸಲುವಾಗಿ ಯೋಜನೆಯನ್ನು ಜಾರಿಗೆ ತರಲಾಗಿದೆ .
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ-561203 ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂ.ಸಂ 080-29501945 ಇಲ್ಲಿಗೆ ಭೇಟಿ ನೀಡಿ ಮಾಹಿತಿ ಪಡೆಯಬಹುದಾಗಿದೆ ಎಂದು ಕೈ ಮಗ್ಗ ಮತ್ತು ಜವಳಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *