ಬೆಂಗಳೂರು : ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2024-25ನೇ ಶೈಕ್ಷಣಿಕ ಬೋಧನಾ ಕಾರ್ಯಕ್ಕೆ ಅಗತ್ಯವಿರುವ ಅತಿಥಿ ಉಪನ್ಯಾಸಕರನ್ನು ಆನ್ ಲೈನ್ ಮೂಲಕ ಕೌನ್ಸೆಲಿಂಗ್ ಗೆ ವೇಳಾಪಟ್ಟಿ ಬಿಡುಗಡೆಯಾಗಿದೆ.
ಕೌನ್ಸೆಲಿಂಗ್ ಗೆ ಕಾಲೇಜು ಶಿಕ್ಷಣ ಇಲಾಖೆಯಿಂದ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ಜನವರಿ- ಫೆಬ್ರವರಿಯಲ್ಲಿ 2, 4 ಮತ್ತು 6ನೇ ಸೆಮಿಸ್ಟರ್ ತರಗತಿಗಳು ಆರಂಭವಾಗಲಿದ್ದು, ಶೈಕ್ಷಣಿಕ ಹಿತದೃಷ್ಟಿಯಿಂದ ಕಾಯಂ ಪ್ರಾಧ್ಯಾಪಕರಿಗೆ ಹಂಚಿಕೆಯಾಗಿ ಉಳಿಕೆಯಾಗುವ ಕಾರ್ಯಭಾರಕ್ಕೆ ಅನುಕೂಲವಾಗಿ ನೇಮಕ ಮಾಡುವಂತೆ ಸೂಚನೆ ನೀಡಲಾಗಿದೆ.
ಕೌನ್ಸೆಲಿಂಗ್ ನಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಜನವರಿ 3ರಿಂದ 8ರವರೆಗೆ ಅರ್ಜಿ ಸಲ್ಲಿಸಬಹುದು.
ಜನವರಿ 9ರಂದು ತಾತ್ಕಾಲಿಕ ಮೆರಿಟ್ ಪಟ್ಟಿಯನ್ನು ಪ್ರಕಟಿಸಲಾಗುವುದು. ನಂತರ ತಿದ್ದುಪಡಿಗೆ ಜನವರಿ 10 ಮತ್ತು 11ರ ವರೆಗೆ ಅವಕಾಶವಿರುತ್ತದೆ. ಜನವರಿ 13ರಂದು ಪಟ್ಟಿಯ ಅನ್ವಯ ಕಾಲೇಜು ಆಯ್ಕೆಯ ಕೌನ್ಸಿಲಿಂಗ್ ನಡೆಸಲಿದ್ದು, ಜನವರಿ 30ರಂದು ಕೌನ್ಸೆಲಿಂಗ್ ನಲ್ಲಿ ಕಾಲೇಜು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ ಗೆ ಭೇಟಿ ನೀಡಬಹುದು.
bigtvnews | Hubli Dharwad News | Kannada News | Karnataka News Hubli News | News In Hubli | Local news

